ಕರ್ನಾಟಕ

ಪ್ರೇಮಿಗಳ ದಿನದಂದು "ಜಸ್ಟ್ ಮ್ಯಾರೀಡ್" ಸಾಂಗ್ ರಿಲೀಸ್

ಶೈನ್ ಶೆಟ್ಟಿ, ಅಂಕಿತ ಅಮರ್, ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ನಿರ್ಮಿಸುತ್ತಿರುವ, ಸಿ.ಆರ್.ಬಾಬಿ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ "ಜಸ್ಟ್ ಮ್ಯಾರೀಡ್"

 ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಎರಡು ಹಾಡುಗಳ ಮೂಲಕ "ಜಸ್ಟ್ ಮ್ಯಾರೀಡ್" ಜನರ ಮನಸ್ಸಿಗೆ ಹತ್ತಿರವಾಗಿದೆ. ಫೆಬ್ರವರಿ 14 ಪ್ರೇಮಿಗಳ ದಿನದಂದು ಈ ಚಿತ್ರದ ಮೂರನೇ ಹಾಡು ಬಿಡುಗಡೆಯಾಗಲಿದೆ. ಪ್ರೇಮಕವಿ ಕೆ.ಕಲ್ಯಾಣ್ ಬರೆದು "ಸರಿಗಮಪ" ಖ್ಯಾತಿಯ ಜಸ್ಕರಣ್ ಸಿಂಗ್ ಹಾಡಿರುವ ಹಾಗೂ ಅಜನೀಶ್ ಲೋಕನಾಥ್ ಸಂಗೀತ ನೀಡಿರುವ "ಇದು ಮೊದಲ ಸ್ವಾಗತಾನಾ" ಎಂಬ ಸುಮಧುರ ಪ್ರೇಮಗೀತೆಯನ್ನು ಪ್ರೇಮಿಗಳದಿನದಂದು ಅಶ್ವಿನಿ ಪುನೀತ್ ರಾಜಕುಮಾರ್ ಅನಾವರಣ ಮಾಡಲಿದ್ದಾರೆ. 