ಕರ್ನಾಟಕ

'ಕನಸೊಂದು ಶುರುವಾಗಿದೆ' ಎಂದ ಡಾರ್ಲಿಂಗ್ ಕೃಷ್ಣ-ಲೂಸ್ ಮಾದಯೋಗ

ನಟ ಲೂಸ್ ಮಾದಯೋಗಿ ಮಾತನಾಡಿ, ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಚಿಕ್ಕ ಸಿನಿಮಾ ದೊಡ್ಡ ಸಿನಿಮಾ ಮ್ಯಾಟರ್ ಅಲ್ಲ. ಜನ ನೋಡಬೇಕು. ಚಿಕ್ಕದೋ? ದೊಡ್ಡದೋ? ಅವರು ಡಿಸೈಡ್ ಮಾಡ್ತಾರೆ. ಜನರಿಗೆ ರೀಚ್ ಆದರೆ ಸಾಕು. ಆ ಕೆಲಸ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಹಾರಾ ಸಿನಿಮಾ ಮೂಲಕ ಚಂದವನಕ್ಕೆ ಹೆಜ್ಜೆ ಇಟ್ಟಿದ್ದ ನಿರ್ದೇಶಕ ಮಂಜೇಶ್ ಈಗ ಕನಸೊಂದು ಶುರುವಾಗಿದೆ ಚಿತ್ರದ ಮೂಲಕ ಸಸ್ಪೆನ್ಸ್ ಥ್ರಿಲ್ಲರ್ ಕಥೆ ಹೇಳಲು ರೆಡಿಯಾಗಿದ್ದಾರೆ. ಮಾರ್ಚ್ 7ರಂದು ತೆರೆಗೆ ಬರುತಿರುವ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ನಟರಾದ ಡಾರ್ಲಿಂಗ್ ಕೃಷ್ಣ, ಲೂಸ್ ಮಾದಯೋಗಿ, ಸಾಹಸ ನಿರ್ದೇಶಕರ ಥ್ರಿಲರ್ ಮಂಜು ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೊಸ ತಂಡಕ್ಕೆ ಸಾಥ್ ಕೊಟ್ಟರು.



ಡಾರ್ಲಿಂಗ್ ಕೃಷ್ಣ ಮಾತನಾಡಿ, ಟೈಟಲ್ ತುಂಬಾ ಇಷ್ಟವಾಯ್ತು. ಮಂಜೇಶ್ ಅವರಿಗೆ ಒಳ್ಳೆಯದಾಗಲಿ. ಸಂತು ಲೀಡ್ ಆಕ್ಟಿಂಗ್ ಮಾಡಿದ್ದಾರೆ. ಸಿನಿಮಾ ನಿಲ್ಲಿಸುವುದು ಕಷ್ಟದ ಕೆಲಸ. ಮಾರ್ಚ್ 7ಕ್ಕೆ ಸಿನಿಮಾ ತೆರೆಗೆ ಬರುತ್ತಿದೆ. ನೋಡಿ ಹಾರೈಸಿ ಎಂದು ತಿಳಿಸಿದರು.

ನಟ ಲೂಸ್ ಮಾದಯೋಗಿ ಮಾತನಾಡಿ, ಇಡೀ ಚಿತ್ರತಂಡಕ್ಕೆ ಒಳ್ಳೆದಾಗ್ಲಿ. ಚಿಕ್ಕ ಸಿನಿಮಾ ದೊಡ್ಡ ಸಿನಿಮಾ ಮ್ಯಾಟರ್ ಅಲ್ಲ. ಜನ ನೋಡಬೇಕು. ಚಿಕ್ಕದೋ? ದೊಡ್ಡದೋ? ಅವರು ಡಿಸೈಡ್ ಮಾಡ್ತಾರೆ. ಜನರಿಗೆ ರೀಚ್ ಆದರೆ ಸಾಕು. ಆ ಕೆಲಸ ಮಾಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. 

ಇನ್ನು ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಮೂವೀ. ನೈಜ ಘಟನೆ ಇಟ್ಕೊಂಡು ಸಿನಿಮಾ ಮಾಡಲಾಗಿದೆ.. KKR ಮೀಡಿಯಾ ಬ್ಯಾನರ್ ನಡಿ ಲಕ್ಷ್ಮೀ ಕಾಂತ್ ರೆಡ್ಡಿ ನಿರ್ಮಿಸಿರುವ 'ಕನಸೊಂದು ಶುರುವಾಗಿದೆ' ಚಿತ್ರದ ಮೂಲಕ ಸಂತೋಷ್ ಬಿಲ್ಲವ ನಾಯಕನಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.  ಅವರಿಗೆ ಜೋಡಿಯಾಗಿ ನಟಿ ಸಾತ್ವಿಕಾ ಕಾಣಿಸಿಕೊಂಡಿದ್ದಾರೆ. ಥ್ರಿಲ್ಲರ್ ಮಂಜು, ಕುರಿ ಸುನಿಲ್ , ರಶ್ಮಿ, ರಾಜು ಕಾಲ್ಕುಣಿ, ಕೃಷ್ಣಮೂರ್ತಿ ಕನಕಪುರ, ನಾಗರತ್ನ ಭಟ್ ತಾರಾಬಳಗದಲ್ಲಿದ್ದಾರೆ.  ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಕನಸೊಂದು ಶುರುವಾಗಿದೆ ಚಿತ್ರವನ್ನು ಬೆಂಗಳೂರು, ಕುಂದಾಪುರ & ಕುಣಿಗಲ್ ಸುತ್ತಮುತ್ತಲ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.