ಕರ್ನಾಟಕ

ಕರ್ನಾಟಕ ಮಾತ್ರವಲ್ಲದೆ ವಿದೇಶದಲ್ಲೂ "ರಾಜು ಜೇಮ್ಸ್ ಬಾಂಡ್"ಗೆ ಮೆಚ್ಚುಗೆ

"ರಾಜು ಜೇಮ್ಸ್ ಬಾಂಡ್" ಚಿತ್ರವನ್ನು ಮೆಚ್ಚಿಕೊಂಡ ಇಲ್ಲಿನ‌ ಹಾಗೂ ವಿದೇಶದಲ್ಲಿರುವ ಎಲ್ಲಾ ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದ‌‌ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ಇದು ನನ್ನೊಬ್ಬನ ಗೆಲುವಲ್ಲ. ನಮ್ಮ ತಂಡದ ಗೆಲುವು. ಎಂದಿದ್ದಾರೆ.

ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ  “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ " ಚಿತ್ರ ಫೆಬ್ರವರಿ 14 ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚಿಗೆ ಯು.ಕೆ‌ ಹಾಗೂ ಯು.ಎಸ್ ನಲ್ಲೂ ಈ ಚಿತ್ರ ಬಿಡುಗಡೆಯಾಗಿದೆ. ಅಲ್ಲಿನ ಜನರು ಸಹ ಈ ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. 


"ರಾಜು ಜೇಮ್ಸ್ ಬಾಂಡ್" ಚಿತ್ರವನ್ನು ಮೆಚ್ಚಿಕೊಂಡ ಇಲ್ಲಿನ‌ ಹಾಗೂ ವಿದೇಶದಲ್ಲಿರುವ ಎಲ್ಲಾ ಕನ್ನಡ ಕಲಾಭಿಮಾನಿಗಳಿಗೆ ಧನ್ಯವಾದ‌‌ ಎಂದು ಮಾತನಾಡಿದ ನಿರ್ದೇಶಕ ದೀಪಕ್ ಮಧುವನಹಳ್ಳಿ, ಇದು ನನ್ನೊಬ್ಬನ ಗೆಲುವಲ್ಲ. ನಮ್ಮ ತಂಡದ ಗೆಲುವು. ಎಂದಿದ್ದಾರೆ. ಬೆಂಗಳೂರಿನಲ್ಲೂ‌ ನಮ್ಮ‌ ಚಿತ್ರ ಚೆನ್ನಾಗಿ ಪ್ರದರ್ಶನವಾಗುತ್ತಿದೆ. ಅದಕ್ಕಿಂತ ಉತ್ತರ ಕರ್ನಾಟಕ ಹಾಗೂ ತುಮಕೂರು ಭಾಗದಲ್ಲಿ ಇನ್ನೂ‌ ಹೆಚ್ಚು ಯಶಸ್ವಿಯಾಗಿದೆ. ಎಂದರು ನಿರ್ಮಾಪಕರಾದ ಕಿರಣ್ ಭರ್ತೂರ್ ಹಾಗೂ ಮಂಜುನಾಥ್ ವಿಶ್ವಕರ್ಮ. ನಾನು ಹೋದ ಕಡೆ ಎಲ್ಲ ಬಾಂಡ್ ಅಂತಲೇ ಗುರುತ್ತಿಸುತ್ತಿರುವುದು ಖುಷಿಯಾಗಿದೆ. ಒಳ್ಳೆಯ ಚಿತ್ರ ನೀಡಿದ ನಿರ್ಮಾಪಕರಿಗೆ, ‌ನಿರ್ದೇಶಕರಿಗೆ ಹಾಗೂ ತಂಡಕ್ಕೆ ನಾಯಕ ಗುರುನಂದನ್ ಧನ್ಯವಾದ ತಿಳಿಸಿದರು.