ಸಿನಿಮಾ

ಫೆಬ್ರವರಿ 7ಕ್ಕೆ ಬರಲಿದೆ "ಅನ್ ಲಾಕ್ ರಾಘವ"

"ರಾಮ ರಾಮ ರೆ" ಖ್ಯಾತಿಯ ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿತ್ರದುರ್ಗದಲ್ಲಾಗಿದೆ. ಲವಿತ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ..

ಟೈಟಲ್ ಮೂಲಕವೇ ನಿರೀಕ್ಷೆ ಹುಟ್ಟುಹಾಕಿದ್ದ ಚಿತ್ರ ಅನ್ ಲಾಕ್ ರಾಘವ…ಸದ್ಯ ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಫೆಬ್ರವರಿ 7 ರಂದು ಈ ಚಿತ್ರ ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್ ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. 

ಚಿತ್ರದ ನಿರ್ದೇಶಕ  ದೀಪಕ್ ಮಾತನಾಡಿ ಇದೊಂದು ಪಕ್ಕಾ‌ ಮನೋರಂಜನೆಯ ರಸದೌತಣ ನೀಡುವ , ಪ್ರೇಕ್ಷಕ ಕೊಟ್ಟ ದುಡ್ಡಿಗೆ ಮೋಸ ಮಾಡದ ಸಿನಿಮಾ ಎಂದರು.."ರಾಮ ರಾಮ ರೆ" ಖ್ಯಾತಿಯ ಸತ್ಯಪ್ರಕಾಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಚಿತ್ರದುರ್ಗದಲ್ಲಾಗಿದೆ. ಲವಿತ್  ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ..

ಚಿತ್ರದಲ್ಲಿ ಸಾಧುಕೋಕಿಲ ಹಾಗೂ ಶೋಭ್ ರಾಜ್ , ಅವಿನಾಶ್, ಭೂಮಿ ಶೆಟ್ಟಿ ಮುಂತಾದವರು ಇದ್ದಾರೆ..