ಕುಂಭಮೇಳಕ್ಕೆ ಹೋಗ್ಬೇಕು ಅಂತೇಳಿ ಸಾಕಷ್ಟು ಜನ ಕನಸು ಕಾಣ್ತಾರೆ, ಅದರಂತೆ ಕೆಲವರು ಸಾಕಾರಗೊಳಿಸಿಕೊಳ್ತಿದ್ದಾರೆ, ಪ್ರಯಾಗ್‌ರಾಜ್‌ಗೆ ಭಕ್ತಾದಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಹೀಗೆ ಕುಂಭಮೇಳಕ್ಕೆ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ, ಕನಿಷ್ಠ 10 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಮಹಾ ಕುಂಭಮೇಳಕ್ಕೆ ಛತ್ತೀಸ್ ಗಢದಿಂದ ಭಕ್ತಾದಿಗಳನ್ನು ಕರೆದೊಯ್ಯುತ್ತಿದ್ದ ಕಾರೊಂದು ಶುಕ್ರವಾರ ತಡ ರಾತ್ರಿ ಮೇಜಾ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಯಾಗ್ ರಾಜ್-ಮಿರ್ಝಾಪುರ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ.
ಘಟನೆಯ ಕುರಿತು ಪ್ರತಿಕ್ರಿಯಿಸಿದ ಯಮುನಾನಗರ ಉಪ ಪೊಲೀಸ್ ಆಯುಕ್ತ ವಿವೇಕ್ ಚಂದ್ರ ಯಾದವ್, “ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ವರೂಪ್ ರಾಣಿ ವೈದ್ಯಕೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಂದಿನ ಪ್ರಕ್ರಿಯೆ ಪ್ರಗತಿಯಲ್ಲಿದೆ” ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇದರೊಂದಿಗೆ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.