ವಿದೇಶ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದಿಂದ ಏರ್‌ಸ್ಟ್ರೈಕ್‌

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿರುವ ಅಫ್ಘಾನಿಸ್ತಾನದ ಹಳ್ಳಿಗಳ ಮೇಲೆ ಪಾಕಿಸ್ತಾನ ವಾಯುಪಡೆ ಏರ್‌ಸ್ಟ್ರೈಕ್‌ ನಡೆಸಿದ್ದು, ದಾಳಿಯಲ್ಲಿ ಹತ್ತಾರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾಬೂಲ್‌: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಗಡಿಯಲ್ಲಿರುವ ಅಫ್ಘಾನಿಸ್ತಾನದ ಹಳ್ಳಿಗಳ ಮೇಲೆ ಪಾಕಿಸ್ತಾನ ವಾಯುಪಡೆ ಏರ್‌ಸ್ಟ್ರೈಕ್‌ ನಡೆಸಿದ್ದು, ದಾಳಿಯಲ್ಲಿ ಹತ್ತಾರು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಆಫ್ಘನ್‌ ಮತ್ತು ಪಾಕ್‌ ಗಡಿಯಲ್ಲಿರುವ ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯಲ್ಲಿರುವ ಹಲವು ಹಳ್ಳಿಗಳ ಮೇಲೆ ಪಾಕಿಸ್ತಾನ ವಾಯುಪಡೆ ವೈಮಾನಿಕ ದಾಳಿ ನಡೆಸಿದೆ. ಡಿಸೆಂಬರ್‌ 24ರ ರಾತ್ರಿ ಪಾಕಿಸ್ತಾನ ಸೇನೆ ಜಿಲ್ಲೆಯ 7 ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ದಾಳಿಯಲ್ಲಿ ಬರ್ಮಾಲ್‌ನ ಮುರ್ಗ್‌ ಬಜಾರ್‌ ಗ್ರಾಮ ಸಂಪೂರ್ಣವಾಗಿ ನಾಶವಾಗಿದೆ. ಮಕ್ಕಳು, ಮಹಿಳೆಯರು ಸೇರಿ ಕನಿಷ್ಠ 15 ಜನರು ಮೃತಪಟ್ಟಿದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಇನ್ನು ಪಾಕಿಸ್ತಾನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತೀಕಾರ ತೀರಿಸಿಕೊಳ್ಳುವುದಾಗಿ ತಾಲಿಬಾನ್‌ ತಿಳಿಸಿದೆ.

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ದಾಳಿ ನಡೆದಿದೆ. ದಾಳಿಯ ಕುರಿತು ಪಾಕಿಸ್ತಾನ ಸೇನೆ ಅಧಿಕೃತವಾಗಿ ಹೇಳಿಕೆ ನೀಡಿಲ್ಲ ಆದರೆ ಮೂಲಗಳ ಪ್ರಕಾರ ಪಾಕಿಸ್ತಾನಿ ತಾಲಿಬಾನ್, ಅಥವಾ ತೆಹ್ರೀಕ್--ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ), ಇತ್ತೀಚಿನ ತಿಂಗಳುಗಳಲ್ಲಿ ಪಾಕಿಸ್ತಾನಿ ಪಡೆಗಳ ಮೇಲೆ ತನ್ನ ದಾಳಿಯನ್ನು ಹೆಚ್ಚಿಸಿದ್ದವು. ಜತೆಗೆ ತಾಲಿಬಾನ್ ಉಗ್ರರಿಗೆ ಅಫ್ಘಾನಿಸ್ತಾನ ಆಶ್ರಯ ನೀಡುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ನಡುವೆ ಗಡಿಯ ಸಮೀಪ ಇರುವ ತಾಲಿಬಾನ್ ಅಡಗುತಾಣಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ.