19 ವರ್ಷದ ಯುವತಿಯನ್ನು ಕಿಡಿಗೇಡಿಗಳು ಅತ್ಯಾಚಾರ ಮಾಡಿ ಕೊಲೆಗೈದಿರುವ ಘಟನೆ, ಬೀದರ್ ಜಿಲ್ಲೆಯ ಗುಣತೀರ್ಥವಾಡಿ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 29ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವತಿಯು ನಾಪತ್ತೆಯಾದ ಕೆಲವೇ ದಿನಗಳಲ್ಲಿ ಶವವಾಗಿ ಪತ್ತೆಯಾಗಿದ್ದು, ಆಕೆಯ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದಿದ್ದಾರೆ. ಈ ಬಗ್ಗೆ ಬಸವಕಲ್ಯಾಣ ಗ್ರಾಮದ ಪೊಲೀಸರು ತಿಳಿಸಿದ್ದಾರೆ.
ಅತ್ಯಾಚಾರಕ್ಕೊಳಗಾದ ಯುವತಿಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಅಲ್ಲದೇ ಆಕೆಯ ದೇಹವನ್ನು ಪೊದೆಗಳ ಮಧ್ಯೆ ಎಸೆದು ಪರಾರಿಯಾಗಿದ್ದರು. ತನಿಖೆಗೆ ಇಳಿದ ಪೊಲೀಸರು ಪ್ರಕರಣ ಸಂಬಂಧ ಮೂವರು ಆರೋಪಿಗಳು ಹಿಡಿದು, ಬಂಧಿಸಿದ್ದಾರೆ.