ಕರ್ನಾಟಕ

ಗದಗ ಜಿಲ್ಲೆಯಾದ್ಯಂತ 206 ಅಂಗನವಾಡಿ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನ.

ಮುಡರಗಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಕೆಲಸಕ್ಕೆ ಒಟ್ಟು 05 ಹಾಗೂ ಅಂಗನವಾಡಿ ಸಹಾಯಕಿಯರು ಒಟ್ಟು 24 ಹುದ್ದೆಗಳನ್ನು, ಹಾಗೂ ನರಗುಂದ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಒಟ್ಟು 05 ಮತ್ತು ಅಂಗನವಾಡಿ ಸಹಾಯಕಿ ಒಟ್ಟು 12 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಯಾವುದೇ ಪರೀಕ್ಷೆ ಇಲ್ಲದೆ 10th, 12th  ಪಾಸಾದವರಿಗೆ ಉದ್ಯೋಗವಕಾಶ. ಗದಗ್ ಜಿಲ್ಲೆಯ ಗದಗ, ಮುಡರಗಿ, ನರಗುಂದ, ರೋಣ, ಶಿರಹಟ್ಟಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಗೌರವ ಸೇವೆಯ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ನೇಮಕ ಪ್ರಕಟಣೆಯನ್ನ ರಾಜ್ಯ ಸರ್ಕಾರ  ಹೊರಡಿಸಿದೆ.

ಮುಡರಗಿ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಕೆಲಸಕ್ಕೆ ಒಟ್ಟು 05 ಹಾಗೂ ಅಂಗನವಾಡಿ ಸಹಾಯಕಿಯರು ಒಟ್ಟು 24 ಹುದ್ದೆಗಳನ್ನು, ಹಾಗೂ ನರಗುಂದ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಒಟ್ಟು 05 ಮತ್ತು ಅಂಗನವಾಡಿ ಸಹಾಯಕಿ ಒಟ್ಟು 12 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳಿಗೆ ಅರ್ಜಿ ಹಾಕಲು ಸೆಪ್ಟೆಂಬರ್ 19 ಕೊನೆ ದಿನವಾಗಿದೆ. ಹಾಗೆಯೇ ಗದಗ ತಾಲ್ಲೂಕು, ರೋಣ, ಶಿರಹಟ್ಟಿ ತಾಲ್ಲೂಕುಗಳಲ್ಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಸೆಪ್ಟೆಂಬರ್ 17.


ಗದಗ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟಾರೆ ಹುದ್ದೆಗಳ ವಿವರ

ಅಂಗನವಾಡಿ ಕಾರ್ಯಕರ್ತೆ ಹುದ್ದೆ

56

ಅಂಗನವಾಡಿ ಸಹಾಯಕಿ ಹುದ್ದೆ

150

ಒಟ್ಟು ಹುದ್ದೆಗಳ ಸಂಖ್ಯೆ

206

ಹುದ್ದೆಗಳ ಕುರಿತು ಹೆಚ್ಚಿನ ಮಾಹಿತಿಗಳನ್ನು ತಿಳಿಯಲು ಅಧಿಸೂಚನೆಗಾಗಿ ಭೇಟಿ ನೀಡಬೇಕಾದ ವೆಬ್ಸೈಟ್ ವಿಳಾಸ: https://gadag.nic.in/