ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಬ್ಯಾಟಿಂಗ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಭಾರತದ ಯುವ ಕ್ರಿಕೆಟಿಗ ನಿತೀಶ್ ಕುಮಾರ್ ರೆಡ್ಡಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸನ್ಮಾನಿಸಿದ್ದಾರೆ. ನಿತೀಶ್ ಕುಮಾರ್ ರೆಡ್ಡಿ ಅವರು ಆಸ್ಟ್ರೇಲಿಯಾ ಪ್ರವಾಸದಲ್ಲಿ ತಮ್ಮ ಆಲ್ರೌಂಡ್ ಪ್ರದರ್ಶನದೊಂದಿಗೆ ಗಮನ ಸೆಳೆದಿದ್ದರು. ಅವರ ಕೊಡುಗೆಯನ್ನು ಗುರುತಿಸಿ ಆಂಧ್ರ ಕ್ರಿಕೆಟ್ ಸಂಸ್ಥೆ (ಎಸಿಎ) ₹25 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಹೀಗಾಗಿ ನಿತೀಶ್ ಅವರು ತಮ್ಮ ತಂದೆ ಮುತ್ಯಾಲ ರೆಡ್ಡಿ ಅವರೊಂದಿಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭೇಟಿ ಮಾಡಿದ್ದರು. ಈ ವೇಳೆ 25 ಲಕ್ಷ ರೂಪಾಯಿ ಚೆಕ್ ಅನ್ನು ಹಸ್ತಾಂತರಿಸಿ, ಸನ್ಮಾನಿಸಲಾಯ್ತು. ನಿತೀಶ್ ಕುಮಾರ್ ರೆಡ್ಡಿ ತೆಲುಗು ಸಮುದಾಯದ ಮಿನುಗುವ ತಾರೆಯಾಗಿದ್ದು, ತಮ್ಮ ಪ್ರದರ್ಶನದ ಮೂಲಕ ಜಾಗತಿಕ ವೇದಿಕೆಯಲ್ಲಿ ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ. ನಾನು ಅವರ ಪೋಷಕರಿಗೆ ಅಭಿನಂದನೆ ಸಲ್ಲಿಸಿದ್ದೇನೆ. ಅವರ ವೃತ್ತಿಜೀವನವನ್ನು ರೂಪಿಸುವಲ್ಲಿ ಅವರ ಬೆಂಬಲವು ಮುಂಬರುವ ವರ್ಷಗಳಲ್ಲಿ ಅವರಿಂದ ಹೆಚ್ಚಿನ ಶತಕಗಳನ್ನು ಮತ್ತು ಹೆಚ್ಚಿನ ಯಶಸ್ಸನ್ನು ಬಯಸುತ್ತೇನೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.