ಕರ್ನಾಟಕ

ಬೈಕ್ & ಟಿಪ್ಪರ್ ನಡುವೆ ಡಿಕ್ಕಿ... ಮೂವರು ಸ್ಥಳದಲ್ಲೇ ಸಾವು..!

ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕೇರಳ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ್ದು, ಕೇರಳ ಮೂಲದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗುಂಡ್ಲುಪೇಟೆ ಕ್ಯಾಲಿಕಟ್ ರಾಷ್ಟ್ರೀಯ ಹೆದ್ದಾರಿ 766ರಲ್ಲಿ, ಬಸವ ಭವನದ ಮುಂದೆ ಮೂವರು ಸಾವನ್ನಪ್ಪಿರುವ ಮಾಹಿತಿ ತಿಳಿದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.