ದಾವಣಗೆರೆ : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಮೇಲೂ ಭಾರಿ ಪರಿಣಾಮ ಬೀರಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕಲುಷಿತ ನೀರು ಸೇವಿಸಿ ಮಗು ಸೇರಿ 5 ಜನ ಸಾವನ್ನಪ್ಪಿದ ದಾರುಣ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಗ್ರಾಮದ ಸುರೇಶ್(30) ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38), 8 ತಿಂಗಳ ಗಂಡು ಮಗು ಸಾವನ್ನಪ್ಪಿದ್ದು ಹಾಗೂ ಗ್ರಾಮದಲ್ಲಿ 50ಕ್ಕೂ ಹೆಚ್ಚು ಜನರು ವಾಂತಿ ಭೇದಿಯಿಂದ ಬಳಲುತ್ತಿದ್ದಾರೆ. ಕಳೆದ ವಾರ ಮೂವರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗಾಲಾಗಿದ್ದು, ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯಲ್ಲಿ ಕಲುಷಿತ ನೀರು ಬಂದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ. ಇಷ್ಟೇಲ್ಲ ಆದರೂ ಕೂಡ ಸ್ಥಳಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿದ ಆರೋಗ್ಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.