ಮಹಾರಾಷ್ಟ್ರದ ಗೊಂಡಿಯಾದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 30 ಜನರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಗೊಂಡಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗೋ ಸಾಧ್ಯತೆಯಿದೆ ಎಂದು ಹೇಳಲಾಗ್ತಿದೆ.
ಬಿಂದ್ರವನ ಟೋಲಾ ಗ್ರಾಮದ ಬಳಿ ರಾಜ್ಯ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಕ್ಷಣ 10 ಲಕ್ಷ ರೂ.ಗಳ ನೆರವು ನೀಡುವಂತೆ ಸಾರಿಗೆ ಇಲಾಖೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಆದೇಶ ಹೊರಡಿಸಿದ್ದಾರೆ.