ಮಂಡ್ಯ : 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿ ಹಿನ್ನೆಲೆ ಸಚಿವ ಚಲುವರಾಯಸ್ವಾಮಿ, ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ ಅವರಿಗೆ ನಾಗರಿಕ ಸನ್ಮಾನ ಮಾಡಲಾಗಿದೆ. ಸಚಿವರು ಸೇರಿದಂತೆ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮಂಡ್ಯ ಜಿಲ್ಲಾ ನಾಗರಿಕ ಅಭಿನಂದನಾ ಸಮಿತಿ ಹಾಗೂ ನೇಗಿಲ ಯೋಗಿ ಸಮಾಜ ಸೇವಾ ಟ್ರಸ್ಟ್ ಅಭಿನಂದನ ಕಾರ್ಯಕ್ರಮ ಆಯೋಜಿಸಿದೆ.
ಸಾಹಿತ್ಯ ಸಮ್ಮೇಳನ ಯಶಸ್ವಿಗೆ ಕಾರಣವಾಗಿರುವ ಸಚಿವರು, ಶಾಸಕರು, ಅಧಿಕಾರಿಗಳಿಗೆ ಹಿನ್ನೆಲೆ ನಾಗರಿಕ ಸನ್ಮಾನದ ಮೂಲಕ ಗೌರವ ನೀಡಲು ಮಂಡ್ಯ ವಿವಿ ಆವರಣದಲ್ಲಿ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮಿ ಸಾನಿಧ್ಯದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಗಿಡಕ್ಕೆ ನೀರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಸಾಹಿತಿ ಪ್ರೊ.ಕೃಷ್ಣೇಗೌಡ, ಜಿಲ್ಲೆಯ ಶಾಸಕರುಗಳು, ಅಧಿಕಾರಿಗಳು ಭಾಗಿಯಾಗಿದ್ದಾರೆ.