ಉದ್ಯೋಗಿಗಳು ವಾರದಲ್ಲಿ 90 ಗಂಟೆ ಕೆಲಸ ಮಾಡಿ ಎನ್ನುವ ಎಲ್ & ಟಿ ಕಂಪನಿ ಅಧ್ಯಕ್ಷ ಎಸ್.ಎನ್. ಸುಬ್ರಮಣಿಯನ್ ಅಭಿಪ್ರಾಯಕ್ಕೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡ ಸ್ಥಾನಗಳಲ್ಲಿ ಇರುವ ಜನರು ಇಂತಹ ಹೇಳಿಕೆಗಳನ್ನು ನೀಡುವುದು ಆಘಾತಕಾರಿ. ಮಾನಸಿಕ ಆರೋಗ್ಯ ಮುಖ್ಯ ಎಂದು ಹ್ಯಾಶ್ಟ್ಯಾಗ್ ಹಾಕಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪೋಸ್ಟ್ ಶೇರ್ ಮಾಡಿದ್ದಾರೆ. ಈ ರೀತಿಯ ನೀತಿಯಿಂದ ಉದ್ಯೋಗಿಗಳ ಮಾನಸಿಕ ಆರೋಗ್ಯ ಏನಾಗಬಹುದು ಎಂದು ಪ್ರಶ್ನಿಸಿದ್ದಾರೆ. ವಾರದಲ್ಲಿ 90 ಗಂಟೆ ಮಾತ್ರವಲ್ಲದೇ ಭಾನುವಾರವೂ ಕೆಲಸ ಮಾಡಿ ಎನ್ನುವ ಎನ್ನುವ ಎಲ್ & ಟಿ ಕಂಪನಿ ಅಧ್ಯಕ್ಷ ಎಸ್.ಎನ್. ಸುಬ್ರಮಣಿಯನ್ ಅಭಿಪ್ರಾಯಕ್ಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧದ ಚರ್ಚೆ ಜೋರಾಗಿದೆ.