ಹಸುಗಳ ಕೆಚ್ಚು ಕೊಯ್ದ ಪ್ರಕರಣ ಸಂಬಂಧ, ಕಾಟನ್ ಪೇಟೆ ಪೊಲೀಸರು ಬಿಹಾರ ಮೂಲದ ಶೇಖ್ ನಸ್ರು ಎಂಬಾತನನ್ನು ಬಂಧಿಸಿದ್ದಾರೆ. ಕುಡಿದ ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವುದು ಬೆಳಕಿಗೆ ಬಂದಿದೆ. ನಿನ್ನೆ ರಾತ್ರಿ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಕುಡಿದ ನಶೆಯಲ್ಲಿ ಕೆಚ್ಚಲು ಕತ್ತರಿಸಿರುವ ಬಗ್ಗೆ ಆರೋಪಿಯೇ ತಪ್ಪೊಪ್ಪಿಕೊಂಡಿರುವ ಆರೋಪಿಗೆ, ಜನವರಿ 24ನೇ ತಾರೀಖಿನವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರ