ಕರ್ನಾಟಕ

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ..ಮಂಡ್ಯದಲ್ಲಿ ಬಿಜೆಪಿ ಬಿಗ್‌ ಪ್ರೊಟೆಸ್ಟ್..!

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ, ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ ಸಂಬಂಧ, ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಹಸುಗಳ ಜೊತೆ ಬೀದಿಗಿಳಿದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.ಸಚಿವರು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಜಮೀರ್‌ ಭಾವಚಿತ್ರಕ್ಕೆ ಸಗಣಿ ಬಳಿದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್‌, ಸಿದ್ದರಾಮಯ್ಯ, ಅರವಿಂದ್‌, ಅಶೋಕ್‌, ಸಿ.ಟಿ ಮಂಜು ಸೇರಿ ಮತ್ತಿತರರು ಭಾಗಿಯಾಗಿದ್ರು.