ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದಿನಿಂದ ಆರಂಭಗೊಂಡಿರುವ ರೈಲ್ವೇಸ್ ಮತ್ತು ದೆಹಲಿ ನಡುವಣ ರಣಜಿ ಪಂದ್ಯದಲ್ಲಿ ಅಭಿಮಾನಿಯೊಬ್ಬ ಸ್ಟೇಡಿಯಂಗೆ ನುಗ್ಗಿದ್ದಾನೆ. ಗ್ಯಾಲರಿಯಿಂದ ಭದ್ರತಾ ಸಿಬ್ಬಂದಿ ಕೈಗೆ ಸಿಗದಂತೆ ಓಡಿ ಹೋಗಿ ಮೈದಾನಕ್ಕೆ ಎಂಟ್ರಿ ಕೊಟ್ಟಿದ್ದಾನೆ. ಆಟದ ಮಧ್ಯೆಯೇ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಬರೋಬ್ಬರಿ 12 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ದೇಶೀಯ ಕ್ರಿಕೆಟ್ ಪಂದ್ಯ ಆಡುತ್ತಿದ್ದಾರೆ.. ದೆಹಲಿ ಪರ ಫೀಲ್ಡಿಂಗ್ ನಡೆಸುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಅಭಿಮಾನಿ ಒಬ್ಬ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾನೆ. ಅಭಿಮಾನಿಯ ಹಿಂದೆಯೇ ಓಡಿ ಬಂದ ಭದ್ರತಾ ಸಿಬ್ಬಂದಿ ತಕ್ಷಣವೇ ಆತನನ್ನ ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.
‘ಡಿ’ ಗುಂಪಿನಲ್ಲಿರುವ ದೆಹಲಿ ತಂಡ ಕ್ವಾರ್ಟರ್ ಫೈನಲ್ ರೇಸ್‌ನಿಂದ ಬಹುತೇಕ ಹೊರಬಿದ್ದಿದ್ದರೂ, ಕೊಹ್ಲಿ ಆಡಲಿದ್ದಾರೆ ಎನ್ನುವ ಕಾರಣಕ್ಕೆ ಈ ಪಂದ್ಯದ ಬಗ್ಗೆ ಭಾರಿ ಕುತೂಹಲ ಮೂಡಿದೆ.. ಕೊಹ್ಲಿ ಆಡುವ ಕಾರಣದಿಂದಲೇ ದಿಲ್ಲಿ ಕ್ರಿಕೆಟ್ ಸಂಸ್ಥೆ 10 ಸಾವಿರ ಉಚಿತ ಟಿಕೆಟ್ ಹಂಚಿದೆ.