ಬೆಂಗಳೂರಿನ ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ಪ್ಲಾನೆಟ್ ಹೋಂಡಾ ಶೋರೂಂನಲ್ಲಿ ಇಂದು ಮಧ್ಯಾಹ್ನ ಭಾರಿ ಅಗ್ನಿ ದುರಂತ ಸಂಭವಿಸಿದೆ.. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ದ್ವಿಚಕ್ರವಾಹನಗಳು ಸುಟ್ಟು ಭಸ್ಮವಾಗಿವೆ... ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಣ್ವ ಆಸ್ಪತ್ರೆ ಸಮೀಪದಲ್ಲಿರುವ ಶುಕ್ರ ಮೋಟರ್‌ರಸನ ಓಕಿನೋವಾ ಎಲೆಕ್ಟ್ರಿಕಲ್ ಬೈಕ್ ಶೋ ರೂಂ ಅಗ್ನಿ ಅವಘಡಕ್ಕೆ ತುತ್ತಾಗಿದೆ.. ಏಕಾಏಕಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಇಡೀ ಕಟ್ಟಡವನ್ನೇ ಬೆಂಕಿ ಆವರಿಸಿಕೊಂಡ ಪರಿಣಾಮ ಹತ್ತಾರು ಬೈಕ್‌ಗಳು ಬೆಂಕಿಗಾಹುತಿಯಾಗಿವೆ.. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಶೋರೂಂನಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ.. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.. ಈ ಹಿಂದೆ ರಾಜಾಜಿನಗರದ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಈ ಘಟನೆಯಲ್ಲಿ ಓರ್ವ ಯುವತಿ ಮೃತಪಟ್ಟಿದ್ದಳು.. ಈ ಅವಘಡ ಮಾಸುವ ಮುನ್ನವೇ ಅದೇ ಪ್ರದೇಶದಲ್ಲಿ ಮತ್ತೊಂದು ಬೈಕ್ ಶೋರೂಂಗೆ ಹೊತ್ತಿ ಉರಿದಿದೆ..