ನಿರ್ಮಾಣ ಹಂತದ ಕಟ್ಟಡದಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. ಮಾದನಾಯಕನಹಳ್ಳಿ ಠಾಣೆ ವ್ಯಾಪ್ತಿಯ ಸೀಗೆಹಳ್ಳಿ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ನಿರ್ಮಾಣ ಹಂತದ ಕಟ್ಟಡ ಧಗಧಗನೇ ಹೊತ್ತಿ ಉರಿದಿದ್ದು, ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ದುರ್ಘಟನೆಯಲ್ಲಿ ಒಬ್ಬರು ಮೃತಪಟ್ಟಿದ್ದು, ನೀರಿನ ಟ್ಯಾಂಕರ್ ಮೇಲೆ ಕುಳಿತು ಜೀವ ಉಳಿಸಿಕೊಂಡಿದ್ದ ಕಾರ್ಮಿಕನನ್ನ ರಕ್ಷಿಸಲಾಗಿದೆ.
ಸತೀಶ್ ಅನ್ನೋರಿಗೆ ಸೇರಿದ ಬಿಲ್ಡಿಂಗ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಿಲ್ಡಿಂಗ್ ನಲ್ಲಿ ವುಡ್ ವರ್ಕ್ಸ್ ಮಾಡಲಾಗಿತ್ತು. ಈ ವೇಳೆ ಕೆಲಸಗಾರರು ಇಟ್ಟುಕೊಂಡಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಬಿದ್ದು ಸಂಪೂರ್ಣ ಬಿಲ್ಡಿಂಗ್ ಸುಟ್ಟು ಕರಕಲಾಗಿದೆ. ಇನ್ನೂ ಘಟನಾ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರೆದಿದೆ.