ಕರ್ನಾಟಕ

ಭಾರಿ ಗಾತ್ರದ ಹೆಬ್ಬಾವು ಪ್ರತ್ಯಕ್ಷ

ಜಮೀನಿನೊಂದರಲ್ಲಿ 15 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಸ್ನೇಕ್ ಸ್ವಾಮಿ ಎಂಬುವರಿಂದ ಹಾವು ರಕ್ಷಣೆ ಮಾಡಲಾಗಿದೆ.

ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು ಶಾಂತಪ್ಪ ಎಂಬುವರ ಜಮೀನಿನಲ್ಲಿ, ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಸುಮಾರು 15 ಅಡಿ ಉದ್ದದ ಹೆಬ್ಬಾವು ಕಂಡ ಜಮೀನು ಮಾಲೀಕ ಗಾಬರಿಗೊಂಡಿದ್ದರು. ಸ್ಥಳಕ್ಕೆ ಬಂದ ಸ್ನೇಕ್ ಸ್ವಾಮಿ ಅವರಿಂದ ಹೆಬ್ಬಾವು ರಕ್ಷಣೆ ಮಾಡಲಾಗಿದೆ. ರಕ್ಷಣೆ ಮಾಡಿದ ಹಾವನ್ನು ಅರಣ್ಯ ಇಲಾಖೆ ಸಿಬ್ಬಂದಿ ಸಮ್ಮುಖದಲ್ಲಿ, ಬಂಡೀಪುರ ಅಭಯಾರಣ್ಯಕ್ಕೆ ಬಿಡಲಾಗಿದೆ.