ತುಮಕೂರು : ಪ್ರೀತಿಸಿದ ಹುಡುಗಿ ಮನೆಯವರು ಮದುವೆ ಮಾಡಿಕೊಡಲು ನಿರಾಕರಿಸಿದಕ್ಕೆ ಆಕೆಯ ಪ್ರಿಯಕರ ಸೂಸೈಡ್ ಮಾಡಿಕೊಂಡಿದ್ದಾನೆ. ಮನನೊಂದ ಮಂಜುನಾಥ್ ತಡರಾತ್ರಿ ಪ್ರೇಯಸಿಯ ಮನೆ ಮುಂದೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತುಮಕೂರಿನ ಜಯನಗರ ಬಳಿಯ ಚನ್ನಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದೆ. ಸದ್ಯ ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.