ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೃತರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. ಟರ್ಕಿಯ ಬೋಲು ಪ್ರಾಂತ್ಯದ ಕಾರ್ಟಲ್ಕಾಯಾ ರೆಸಾರ್ಟ್‌ನಲ್ಲಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನ ರೆಸ್ಟೋರೆಂಟ್‌ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಭಾರಿ ಅವಘಡಗಳೇ ಸಂಭವಿಸಿದೆ.
ಈ ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈನ್ನೂ ಈ ಹೋಟೆಲ್‌ನಲ್ಲಿ ಸುಮಾರು 234ಕ್ಕೂ ಹೆಚ್ಚು ಅತಿಥಿಗಳು ತಂಗಿದ್ದರು ಎಂದು ತಿಳಿದು ಬಂದಿದ್ದು, ಅವರನ್ನೆಲ್ಲ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಅವಘಡದಲ್ಲಿ ಬೆಲೆಬಾಳುವ ವಸ್ತುಗಳು ಅಗ್ನಿಗಾಹುತಿಯಾಗಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.