ವೈರಲ್

ಪೊಲೀಸ್‌ ಸ್ಟೇಷನ್‌ನಲ್ಲಿ ಸಿಬ್ಬಂದಿ ಮೇಲೆಯೇ ಹಲ್ಲೆ..!

ಮಂಡ್ಯ ಜಿಲ್ಲೆ ಪಾಂಡವಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ, ಪೊಲೀಸ್‌ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ಟೌನ್‌ ಪೊಲೀಸ್‌ ಠಾಣೆಯಲ್ಲಿ, ಪೊಲೀಸ್‌ ಸಿಬ್ಬಂದಿ ಮೇಲೆಯೇ  ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಜಮೀನು ವಿವಾದ ಹಿನ್ನೆಲೆ ಸಾಗರ್‌ ಎಂಬಾತನನ್ನು ಪೊಲೀಸ್‌ ಠಾಣೆಗೆ ಕರೆಸಲಾಗಿತ್ತು. ಈ ವೇಳೆ ಮಾತಿಗೆ ಮಾತು ಬೆಳೆದು, ಮೊದಲು ಪೊಲೀಸ್‌ ಕಾನ್ಸ್‌ಟೇಬಲ್‌ ಅಭಿಷೇಕ್‌ ಕೈ ಮಾಡುತ್ತಾರೆ. ಆಗ ಸಾಗರ್‌ ಪ್ರತಿದಾಳಿ ಮಾಡಿ ಪೇದೆ ಕುತ್ತಿಗೆ ಪಟ್ಟಿ ಹಿಡಿದು ಗೂಂಡಾಗಿರಿ ಮಾಡುತ್ತಾರೆ. ಬಳಿಕ ಪರಾರಿಯಾಗಲು ಯತ್ನಿಸಿದ ಸಾಗರ್‌ನ ಪೊಲೀಸು ವಶಕ್ಕೆ ಪಡೆದಿದ್ದಾರೆ.