ಪಾರಿವಾಳದ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ಜೊತೆ ಗಲಾಟೆ ಮಾಡಿಕೊಂಡು ತ್ರಿಶಾಲ್ (13) ಆತ್ಮಹತ್ಯೆಗೆ ಶರಣಾಗಿದ್ದಾನೆ.. ತುಮಕೂರು ನಗರದ ವಿಜಯನಗರದ 2ನೇ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ.. ಬಿಜೆಪಿ ಕಾರ್ಯಕರ್ತೆ ಶಂಕುತಲಾ ನಟರಾಜ್ ಮಗನಾಗಿರುವ ತ್ರಿಶಾಲ್, ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ.. ಇಂದು ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾಲಾ ಸಮವಸ್ತ್ರದಲ್ಲೇ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.. ತನ್ನ ಸಾವಿಗೆ ಕಾರಣ ಏನು ಅಂತಾ ಡೆತ್ನೋಟ್ ಬರೆದಿಟ್ಟು ಜೀವಬಿಟ್ಟಿದ್ದಾನೆ.. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ..