ಕರ್ನಾಟಕ

ಚಲಿಸುತ್ತಿದ್ದ ಬಸ್‌ಗೆ ಬೆಂಕಿ...ಅದೃಷ್ಟವಶಾತ್‌ ತಪ್ಪಿದ ಅನಾಹುತ..!

ಚಲಿಸುತ್ತಿದ್ದ ಸರ್ಕಾರಿ ಬಸ್ಸಿಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಮೈಸೂರಿನ ರೈಲ್ವೆ ನಿಲ್ದಾಣದ ದಾಸಪ್ಪ ವೃತ್ತದ ಸಮೀಪ ನಡೆದಿದೆ.

ಚಲಿಸುತ್ತಿದ್ದ ಸರ್ಕಾರಿ ಬಸ್ಸಿಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ಮೈಸೂರಿನ ರೈಲ್ವೆ ನಿಲ್ದಾಣದ ದಾಸಪ್ಪ ವೃತ್ತದ ಸಮೀಪ ನಡೆದಿದೆ. ಮೈಸೂರಿನಿಂದ ವಿರಾಜಪೇಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ, ಇದ್ದಕ್ಕಿದ್ದಂತೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಪ್ರಯಾಣಿಕರು ಬಸ್‌ನಿಂದ ಕೆಳಗಿಳಿದಿದ್ದು, ಚಾಲಕ ಹಾಗೂ ನಿರ್ವಾಹಕ ಕೂಡಲೇ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ  ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪೈಪ್‌ನಿಂದ ಡೀಸೆಲ್‌ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ. ದೇವರಾಜ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.