ಅಮೆರಿಕಾದ ಸೇನಾ ಹೆಲಿಕಾಪ್ಟರ್‌ಗೆ ಪ್ರಯಾಣಿಕರ ಜೆಟ್ ಡಿಕ್ಕಿ ಹೊಡೆದು ಭಾರಿ ದುರಂತ ಸಂಭವಿಸಿರುವ ಘಟನೆ, ವಾಷಿಂಗ್ಟನ್ ಡಿಸಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ ರೇಗನ್ ವಾಷಿಂಗ್ಟನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪೊಟೊಮ್ಯಾಕ್ ನದಿಯಲ್ಲಿ ಘಟನೆ ನಡೆದಿದ್ದು, ಹಲವರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗುತ್ತಿದೆ.
ಜೆಟ್ ವಿಮಾನದಲ್ಲಿ 60 ಮಂದಿ ಪ್ರಯಾಣಿಕರು ನಾಲ್ವರು ಸಿಬ್ಬಂದಿ ಇದ್ದರು ಎನ್ನಲಾಗಿದೆ. ಅಗ್ನಿಶಾಮಕ ದೋಣಿಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿವೆ ಎಂದು ಮಾಹಿತಿ ತಿಳಿದು ಬಂದಿದೆ.