ಮೈಸೂರು: ಯುವಕನೊಬ್ಬ ಹಾಕಿದ ಒಂದು ಸೋಷಿಯಲ್ ಮೀಡಿಯಾ ಪೋಸ್ಟ್ ಸಾಂಸ್ಕೃತಿಕ ನಗರಿ ಮೈಸೂರಿನ ಶಾಂತಿಯನ್ನೇ ಕದಡಿದೆ. ಕಲ್ಯಾಣಗಿರಿ ಬಡಾವಣೆಯ ಯುವಕನೊಬ್ಬ ದೆಹಲಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪೋಸ್ಟ್ ಒಂದನ್ನ ಮಾಡಿದ್ದ. ಸಂಸದ ರಾಹುಲ್ ಗಾಂಧಿ, ಮಾಜಿ ಸಿಎಂಗಳಾದ ಅಖಿಲೇಶ್ ಯಾದವ್ ಹಾಗೂ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವನ್ನು ವ್ಯಂಗ್ಯವಾಗಿ ಬಳಸಿ ಸೋಶಿಯಲ್ ಮೀಡಿಯಾ ಪೋಸ್ಟ್ ಹಾಕಿದ್ದ. ಜೊತೆಗೆ ಒಂದು ಧರ್ಮಕ್ಕೆ ಅವಮಾನ ಮಾಡುವ ರೀತಿ ವಾಕ್ಯಗಳನ್ನು ಬರೆಯಲಾಗಿತ್ತು ಇದರಿಂದಾಗಿ ಉದ್ರಿಕ್ತ ಗುಂಪು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಉದಯಗಿರಿ ಪೊಲೀಸರು ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಆದರೆ, ಉದ್ರಿಕ್ತರ ಗುಂಪು ಆಕ್ರೋಶದಿಂದ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿವೆ. ಉದಯಗಿರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದ ಯುವಕರ ಗುಂಪು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿವೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಶರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಆದರೆ ಅದಕ್ಕೂ ಉದ್ರಿಕ್ತರ ಗುಂಪು ಕದಲದಿದ್ದಾಗ, ಉದ್ವಗ್ನತೆಯನ್ನ ಶಾಂತಗೊಳಿಸಲು ಪೊಲೀಸರು ಅಶ್ರುವಾಯು ಸಿಡಿಸಿ ಯುವಕರ ಗುಂಪನ್ನು ಚದುರಿಸಿದ್ದಾರೆ.