ಕರ್ನಾಟಕ

ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ..ಮಹಿಳೆ ಬಟ್ಟೆ ಹರಿದು ಹಲ್ಲೆ..!

ಮಹಿಳೆಯೊಬ್ಬರ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಕುಂದಾನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದುಹೋಗಿದೆ. ವಡ್ಡರವಾಡಿ ಎಂಬಲ್ಲಿ ಮಹಿಳೆಯೊಬ್ಬರ ಬಟ್ಟೆ ಹರಿದು ಹಾಕಿ ಹಲ್ಲೆ ಮಾಡಿದ್ದಾರೆ. ಆಕೆಯ ಮಗಳು ವೇಶ್ಯಾವಾಟಿಕೆ ಮಾಡುತ್ತಿದ್ದಾಳೆ ಎಂದು ಆರೋಪಿಸಿ, ಮನೆಯೊಳಗೆ ನುಗ್ಗಿ ಎಳೆದು ತಂದು ತಾಯಿ-ಮಗಳ ಮೇಲೆ ಹಲ್ಲೆ ಮಾಡಿದ್ದಾರೆ. 

ಹಲ್ಲೆಗೊಳಗಾದ ಮಹಿಳೆಯ ಮನೆಯ ಪಕ್ಕದ ಅಷ್ಟೇಕರ್ ಎಂಬ ಕುಟುಂಬದ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಮನೆಗೆ ನುಗ್ಗಿ ಹಲ್ಲೆ ಮಾಡಿ ಬಟ್ಟೆ ಹರಿದು ಹಾಕುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಎಫ್ಐಆರ್ ದಾಖಲಾಗಿದೆ.