ಮಂಡ್ಯ : KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ KSRTC ಬಸ್ ನಿಲ್ದಾಣದ ಬಳಿ ನಡೆದಿದೆ. ತೂಬಿನಕೆರೆ ಗ್ರಾಮದ ಅರುಣ್ (23) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಬಸ್ ನಿಲ್ದಾಣದಿಂದ ಬೆಂಗಳೂರು-ಮೈಸೂರು ಹೆದ್ದಾರಿಗೆ ಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಚಲಿಸುತ್ತಿದ್ದ ಬಸ್ ಚಕ್ರಕ್ಕೆ ಏಕಾಏಕಿ ತಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸ್ ಹಿಂಬದಿ ಚಕ್ರ ತಲೆ ಮೇಲೆ ಹರಿದ ಹಿನ್ನೆಲೆ ಸ್ಥಳದಲ್ಲೇ ಅರುಣ್ ಸಾವನ್ನಪ್ಪಿದ್ದಾನೆ. ಅರುಣ್ ಬಸ್ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.