ಕರ್ನಾಟಕ

ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

ಮಾದಹಳ್ಳಿ‌ ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ಕೆಂಪೇಗೌಡರ ಪುತ್ರ ಇಂಜಿನಿಯರಿಂಗ್ ಓದುತ್ತಿದ್ದ ಯುವಕ ಸಂತೋಷ್ ಅಪಘಾತ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

ಮಂಡ್ಯ : ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಾದಹಳ್ಳಿ‌ ಗ್ರಾಮದ ಸಂತೋಷ್(20)ಮೃತಪಟ್ಟಿದ್ದಾರೆ. 

ಮಾದಹಳ್ಳಿ‌  ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ಕೆಂಪೇಗೌಡರ ಪುತ್ರ ಇಂಜಿನಿಯರಿಂಗ್ ಓದುತ್ತಿದ್ದ ಯುವಕ ಸಂತೋಷ್ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. 
ಮೃತ ಯುವಕನ ಶವವನ್ನು ಮಳವಳ್ಳಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.