ಕರ್ನಾಟಕ
ನೈತಿಕ ಪೊಲೀಸ್‌ಗಿರಿ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಕ್ರಮ : ಜಿ.ಪರಮೇಶ್ವರ್
ಡುಪಿಯಲ್ಲಿ ಮಾತನಾಡಿದ ಜಿ. ಪರಮೇಶ್ವರ್, ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ ಎಂದಿದ್ದಾರೆ.
ಮಂಗಳೂರಿನಲ್ಲಿ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ರಾಮಸೇನೆ ಕಾರ್ಯಕರ್ತ ಮೇಲೆ ಕ್ರಮಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಜಿ. ಪರಮೇಶ್ವರ್, ಮಸಾಜ್ ಸೆಂಟರ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಆ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಮಸಾಜ್ ನಡೆಸಲು ಅನುಮತಿ ಇತ್ತಾ? ಇಲ್ವಾ ಎಂದು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಹೇಳ್ತೇನೆ ಎಂದಿದ್ದಾರೆ..