ರಾಜ್ಯ ಸರ್ಕಾರ ಘೋಷಿಸಿದ್ದ 2019ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.. ಕನ್ನಡದ ʼಪೈಲ್ವಾನ್ʼ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಕಿಚ್ಚ ಸುದೀಪ್ ಆಯ್ಕೆ ಮಾಡಲಾಗಿತ್ತು.. ಆದರೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಈ ಪ್ರಶಸ್ತಿಯನ್ನು ಸ್ವೀಕರಿಸಲು ಕಿಚ್ಚ ಸುದೀಪ್ ನಿರಾಕರಿಸಿದ್ದಾರೆ.. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿರುವ ಕಿಚ್ಚ ಸುದೀಪ್ ʼಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ ಒಂದು ಸೌಭಾಗ್ಯ, ಮತ್ತು ಈ ಗೌರವಕ್ಕಾಗಿ ತೀರ್ಪುಗಾರರಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು.. ಪ್ರಶಸ್ತಿಗಳನ್ನು ನಾನು ಎಂದೂ ನಿರೀಕ್ಷಿಸಲ್ಲ.. ಹಲವು ವರ್ಷಗಳಿಂದ ನಾನು ಪ್ರಶಸ್ತಿ ಸ್ವೀಕರಿವುದನ್ನು ನಿಲ್ಲಿಸಿದ್ದೇನೆ.. ಅನೇಕ ಅರ್ಹ ನಟರು ಸಿನಿಮಾಗಾಗಿ ಕಷ್ಟಪಟ್ಟಿದ್ದಾರೆ.. ಅವರಲ್ಲಿ ಒಬ್ಬರು ಈ ಪ್ರಶಸ್ತಿ ಸ್ವೀಕರಿಸುವುದನ್ನು ನೋಡಲು ಖುಷಿ ಕೊಡುತ್ತದೆ.. ನನ್ನನ್ನು ಆಯ್ಕೆ ಮಾಡಿದ್ದಕ್ಕಾಗಿ ನಾನು ಪ್ರತಿಯೊಬ್ಬ ಜ್ಯೂರಿ ಸದಸ್ಯರಿಗೆ ಕೃತಜ್ಞನಾಗಿದ್ದೇನೆ.. ತೀರ್ಪುಗಾರರು ಮತ್ತು ರಾಜ್ಯ ಸರ್ಕಾರಕ್ಕೆ ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಮತ್ತು ನೀವು ನನ್ನ ಆಯ್ಕೆಯನ್ನು ಗೌರವಿಸುತ್ತೀರಿ ಮತ್ತು ನಾನು ಆಯ್ಕೆ ಮಾಡಿದ ಹಾದಿಯಲ್ಲಿ ನನ್ನನ್ನು ಬೆಂಬಲಿಸುತ್ತೀರಿ ಎಂದು ನಾನು ನಂಬುತ್ತೇನೆ ಎಂದಿದ್ದಾರೆ..