ಕರ್ನಾಟಕ

ನಟಿ ಉಮಾಶ್ರೀಗೆ ಗೌರವ ಡಾಕ್ಟರೇಟ್​ ಪ್ರದಾನ..!

ಘಟಿಕೋತ್ಸದಲ್ಲಿ ನಟಿ ಉಮಾಶ್ರೀ, ಎಸ್. ಕೆ. ಮೋದಿ, ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿ ಮೂರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ನಟಿ ಉಮಾಶ್ರೀ ಅವರಿಗೆ ರಂಗಭೂಮಿ, ಕಲೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 2022-23ನೇ ಸಾಲಿನ 12ನೇ ವಾರ್ಷಿಕ ಘಟಿಕೋತ್ಸವ ನಡೆದಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತುರಂಗಭೂಮಿ, ಸಿನಿಮಾ ಕ್ಷೇತ್ರದ ಸಾಧನೆಗಾಗಿ ಹಿರಿಯ ನಟಿ ಉಮಾಶ್ರೀ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಗೌರವಿಸಲಾಯಿತು.

Umashree : Kannada Actor Age, Movies, Biography, Photos

 12ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ ವಿಶ್ವವಿದ್ಯಾಲಯದ ಬಯಲು ರಂಗಮಂದಿರದ ಆವರಣದಲ್ಲಿ ನಡೆಯಿತು. ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ರಾಜ್ಯಪಾಲರು ಹಾಗೂ ವಿಶ್ವ ವಿದ್ಯಾಲಯದ ಕುಲಾಧಿಪತಿ ಥಾವರಚಂದ್ ಗೆಹ್ಲೋಟ್ ವಹಿಸಿದ್ದಾರೆಹಿರಿಯ ವಿಜ್ಞಾನಿ ಹಾಗೂ ಧಾರವಾಡ ಐಐಟಿಯ ಡೀನ್ ಮತ್ತು ಗೌರವ ಪ್ರಾಧ್ಯಾಪಕ ಪ್ರೊ. ಎಸ್. ಎಮ್. ಶಿವಪ್ರಸಾದ್ ಘಟಿಕೋತ್ಸವ ಭಾಷಣವನ್ನು ಮಾಡಿದರು.

 ವಾರ್ಷಿಕ ಘಟಿಕೋತ್ಸವ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಎಂ. ಮುನಿರಾಜು ನೇತೃತ್ವದಲ್ಲಿ ನಡೆಯಿತು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರುಗಳು, ಕುಲಸಚಿವರಾದ ಎಸ್. ಎನ್. ರುದ್ರೇಶ್, ಕುಲಸಚಿವ (ಮೌಲ್ಯಮಾಪನ) ಪ್ರೊ. ರಮೇಶ್ ಓಲೇಕಾರ ಮುಂತಾದವರು ಪಾಲ್ಗೊಂಡಿದ್ದರು.

 ನಟಿ ಉಮಾಶ್ರೀ ಪರಿಚಯ 

  ಬಾರಿಯ ಘಟಿಕೋತ್ಸವದಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ವಿವಿಧ ವಿಭಾಗಗಳ 42 ವಿದ್ಯಾರ್ಥಿಗಳು 53 ಚಿನ್ನದ ಪದಕಗಳನ್ನು ಪಡೆದರು. ವಿವಿಧ ವಿಭಾಗಗಳ ಒಟ್ಟು 36 ಸಂಶೋಧನಾರ್ಥಿಗಳು ಡಾಕ್ಟರೇಟ್ ಪದವಿ ಪಡೆದರು. ಎಲ್ಲ ವಿಭಾಗಗಳ ಸ್ನಾತಕ ಪದವಿಯ 56 ವಿದ್ಯಾರ್ಥಿಗಳು ಮತ್ತು ಸ್ನಾತಕೋತ್ತರ ಪದವಿಯಿಂದ 69 ಒಟ್ಟು 125 ವಿದ್ಯಾರ್ಥಿಗಳು ರ್ಯಾಂಕ್ ಪ್ರಮಾಣ ಪತ್ರಗಳನ್ನು ನೀಡಲಾಯಿತು.

 ಘಟಿಕೋತ್ಸದಲ್ಲಿ ನಟಿ ಉಮಾಶ್ರೀ, ಎಸ್. ಕೆ. ಮೋದಿ, ಚಂದ್ರಮೌಳೇಶ್ವರ ಶಿವಾಚಾರ್ಯ ಸ್ವಾಮೀಜಿ ಸೇರಿ ಮೂರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ನಟಿ ಉಮಾಶ್ರೀ ಅವರಿಗೆ ರಂಗಭೂಮಿ, ಕಲೆ ಮತ್ತು ಸಮಾಜ ಸೇವೆ ವಿಭಾಗದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ತುಮಕೂರು ಜಿಲ್ಲೆಯ ನೊಣವಿನಕೆರೆಯಲ್ಲಿ 1957 ಮೇ 10ರಂದು ಜನಿಸಿದ ಉಮಾಶ್ರೀ, 100ಕ್ಕೂ ಹೆಚ್ಚು ನಾಟಕ, 6,500 ಪ್ರದರ್ಶನ ಮತ್ತು 460ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ನಟಿ ಉಮಾಶ್ರೀ ಅವರು ಕಾಂಗ್ರೆಸ್ ಪ್ಷಕದ ಜೊತೆ ಗುರುತಿಸಿಕೊಂಡು ಶಾಸಕರಾಗಿ, ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಹಾಲಿ ವಿಧಾನ ಪರಿಷತ್ಸದಸ್ಯರು. 2013 ರಿಂದ 2018 ರವರೆಗೆ ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಶ್ರೀ. ಕೆ. ವಿ. ಶಂಕರೇಗೌಡ ಪ್ರಶಸ್ತಿ, ನಾಟ್ಯ ಸಮ್ಮಾನ್ ರಾಷ್ಟ್ರೀಯ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, 10ನೇ ಒಷಿಯನ್ಸ್ ಸಿನೆಫ್ಯಾನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 'ಗುಲಾಬಿ ಟಾಕೀಸ್' ಚಲನಚಿತ್ರಕ್ಕಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

 ಉಮಾಶ್ರೀ ಪ್ರತಿಷ್ಠಿತ ರಜತ್ ಕಮಲ್ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ದಿವಂಗತ ಡಿ. ದೇವರಾಜ ಅರಸು ರಾಷ್ಟ್ರೀಯ ಶ್ರೀರತ್ನ ಪ್ರಶಸ್ತಿ, ಪಂಚರತ್ನ ರಾಜ್ಯೋತ್ಸವ ಪ್ರಶಸ್ತಿ, ಶ್ರೀ ಕೃಷ್ಣದೇವರಾಯ ಪ್ರಶಸ್ತಿಯಂತಹ ಅನೇಕ ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.