ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರ ಕಿರಿಯ ಪುತ್ರ ಜೀತ್ ಅದಾನಿ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆದಿದೆ. ಜೀತ್ ಅದಾನಿ ಮತ್ತು ದಿವಾ ಶಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಗುಜರಾತ್ನ ಅಹ್ಮದಾಬಾದ್ನಲ್ಲಿ ಮದುವೆ ಕಾರ್ಯಕ್ರಮ ಅತ್ಯಂತ ಸರಳವಾಗಿ ನಡೆದಿದೆ. ಮದುವೆ ಸಮಾರಂಭಕ್ಕೆ ಕೇವಲ ಸಂಬಂಧಿಕರು, ಆಪ್ತರು ಮಾತ್ರ ಭಾಗಿಯಾಗಿದ್ದರು.
ಅದಾನಿಯವರು ತಮ್ಮ ಮಗನ ಮದುವೆಯನ್ನ ಅತ್ಯಂತ ಸರಳ ಸುಂದರವಾಗಿ ಮಾಡಿದ್ದು, ವಿವಿಧ ಸಾಮಾಜಿಕ ಕಾರ್ಯಗಳಿಗೆ ಎಂದು ಬರೋಬ್ಬರಿ 10 ಸಾವಿರ ಕೋಟಿ ರೂಪಾಯಿ ಆರ್ಥಿಕ ನೆರವು ಘೋಷಣೆ ಮಾಡಿದ್ದಾರೆ.
ಇನ್ನೂ ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಅದಾನಿಯವರು, ದೇವರ ದಯೆಯಿಂದ ಜೀತ್ ದಿವಾ ಮದುವೆ ಸಂಪನ್ನವಾಗಿದೆ. ಚಿಕ್ಕದಾಗಿ ಕಾರ್ಯಕ್ರಮ ಆಯೋಜನೆ ಮಾಡಿಕೊಂಡಿದ್ದರಿಂದ ಅನೇಕ ಹಿತೈಷಿಗಳಿಗೆ ಆಮಂತ್ರಿಸಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.