ಕರ್ನಾಟಕ

ಏರ್ ಶೋ : ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಜಿರಳೆ ಹುಳ ಪತ್ತೆ.. ಎಚ್ಚೆತ್ತ ಸರ್ಕಾರ

ಏರ್ ಶೋ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಹುಳ ಪತ್ತೆಯಾಗಿತ್ತು. ಈ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು.

ಬೆಂಗಳೂರು : ಏರೋ ಇಂಡಿಯಾ 2025ರ ಭದ್ರತೆಗೆ ನಿಯೋಜನೆಗೊಂಡಿರುವ ಕರ್ನಾಟಕ ಪೊಲೀಸರಿಗೆ ನೀಡುತ್ತಿರುವ ಆಹಾರದಲ್ಲಿ ಜಿರಳೆ, ಹುಳ ಪತ್ತೆ ಆಗುತ್ತಿರುವ ಹಿನ್ನೆಲೆ, ಪೊಲೀಸರಿಗೆ ಆಹಾರ ಒದಗಿಸುವ ಹೊಣೆಯನ್ನು ಇದೀಗ ಸರ್ಕಾರ ಇಸ್ಕಾನ್ ಸಂಸ್ಥೆಗೆ ವಹಿಸಿದೆ. 

ಏರ್ ಶೋ ಭದ್ರತೆಗೆ ನಿಯೋಜಿಸಿದ್ದ ಪೊಲೀಸರಿಗೆ ನೀಡಿದ್ದ ಆಹಾರದಲ್ಲಿ ಹುಳ ಪತ್ತೆಯಾಗಿತ್ತು. ಈ ವಿಡಿಯೋ ಹಾಗೂ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದವು. ಇದರಿಂದ ಆಡಳಿತಕ್ಕೆ ಇರಿಸುಮುರಿಸು ಆಗಿದ್ದಲ್ಲದೆ, ಪೊಲೀಸ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದರಿಂದಾಗಿ ಎಚ್ಚೆತ್ತ ಸರ್ಕಾರ ಖಾಸಗಿ ಸಂಸ್ಥೆಗೆ ನೀಡಿದ್ದ ಆಹಾರ ಪೂರೈಕೆ ಗುತ್ತಿಗೆಯನ್ನು ರದ್ದುಪಡಿಸಿದೆ.
ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿದ ಈಶಾನ್ಯ ವಿಭಾಗದ ಡಿಸಿಪಿ ವಿಜೆ ಸಜಿತ್ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.