ಬಾಲಿವುಡ್ ಸ್ಟಾರ್ ದಂಪತಿ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಡಿವೋರ್ಸ್ ವದಂತಿ ಇಡೀ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿತ್ತು. ಡಿವೋರ್ಸ್ ವದಂತಿ ಬಿಟೌನ್‌ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ದಾಂಪತ್ಯ ಜೀವನದಲ್ಲಿ ಯಾವುದು ಸರಿಇಲ್ಲ ಎನ್ನುವಾಗಲೇ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ.
ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಎಲ್ಲಾ ಡಿವೋರ್ಸ್ ಗಾಸಿಪ್‌ಗಳಿಗೆ ತೆರೆ ಎಳೆದಿದ್ದಾರೆ. ಹೌದು, ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಮಗಳಾದ ಆರಾಧ್ಯ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಡ-ಹೆಂಡತಿ ಒಟ್ಟಿಗೆ ಆಗಮಿಸಿ ಮಗಳಿಗೆ ಸಪೋರ್ಟ್ ಮಾಡಿದ್ದಾರೆ. ಐಶ್ವರ್ಯ ರೈ ಹಾಗೂ ಅಭಿಷೇಕ್ ಬಚ್ಚನ್ ಒಟ್ಟಿಗೆ ಕಾಣಿಸಿಕೊಂಡ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಆರಾಧ್ಯ ಧೀರುಭಾಯ್ ಅಂಬಾನಿ ಸ್ಕೂಲ್‌ನಲ್ಲಿ ಓದುತ್ತಿದ್ದು, ಶಾಲೆಯ ಕಾರ್ಯಕ್ರಮಕ್ಕೆ ಬಿಗ್ ಬಿ ಅಮಿತಾಭ್ ಬಚ್ಚನ್ ಜೊತೆ ಅಭಿಷೇಕ್, ಐಶ್ವರ್ಯಾ ಜೋಡಿಯಾಗಿ ಬಂದು ಗಾಸಿಪ್ ಮಾಡುವವರ ಬಾಯಿ ಮುಚ್ಚಿಸಿದ್ದಾರೆ.