ರಾಮನಗರ : ಚುನಾವಣಾ ಪ್ರಚಾರದ ವೇಳೆ ಹಣ ಹಂಚಿಕೆ ಆರೋಪ ಸಚಿವ ಜಮೀರ್ ಅಹ್ಮದ್ ವಿರುದ್ಧ ದೂರು ದಾಖಲಿಸಲಾಗಿದೆ. ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ. ಮೊನ್ನೆ ಚನ್ನಪಟ್ಟಣದ ಯಾರಬ್ ನಗರದಲ್ಲಿ ಪ್ರಚಾರದ ವೇಳೆ ಜಮೀರ್ 500 ರೂ. ಮುಖಬೆಲೆಯ ನೋಟುಗಳನ್ನ ನೀಡಿರುವ ಆರೋಪ ಸಚಿವರ ಮೇಲೆ ದೂರು ದಾಖಲಿಸಲಾಗಿದೆ. ಈ ಬಗ್ಗೆ ಮಾಧ್ಯಮಗಳ ವರದಿ ಉಲ್ಲೇಖಿಸಿ ಚನ್ನಪಟ್ಟಣ ಪೂರ್ವ ಪೊಲೀಸ್ ಠಾಣೆಯಲ್ಲಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದಾರೆ.