ಮಹಾರಾಷ್ಟ್ರ : ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೆಲದಿನಗಳ ಹಿಂದೆ ರಾಹುಲ್ ಗಾಂಧಿಯನ್ನು ಮುಸ್ಮಿಂ ಮುಖಂಡರು ಭೇಟಿಯಾಗಿ ಮುಸ್ಲಿಂರಿಗೆ ಮೀಸಲಾತಿ ನೀಡಬೇಕೆಂದು ಮನವಿ ಮಾಡಿದ್ದರು. ಒಂದು ಸಲ ಮುಸ್ಲಿಂರಿಗೆ ಮೀಸಲಾತಿ ನೀಡಿದ್ರೆ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಬೇಕಾಗುತ್ತದೆ. ರಾಹುಲ್ ಬಾಬಾ, ನೀವು ಮಾತ್ರವಲ್ಲ, ನಿಮ್ಮ 4 ತಲೆಮಾರು ಬಂದರೂ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾದ ಕೋಟಾವನ್ನು ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಸಾಧ್ಯವಿಲ್ಲ ಎಂದು ಅಮಿತ್ ಶಾ ಹೇಳಿದರು.
ಜಮ್ಮು, ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ 370ನೇ ವಿಧಿಯನ್ನ ಇಂದಿರಾ ಗಾಂಧಿ ಮರಳಿ ಬಂದರೂ ಪುನಃ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಅಮಿತ್ ಶಾ ಕಿಡಿಕಾರಿದ್ದಾರೆ.