ಕಡಲ ತೀರದ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ, ಚಿತ್ರ "ಅಮರಾವತಿ ಪೊಲೀಸ್ ಸ್ಟೇಷನ್".
ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸಿರುವ, ಪುನೀತ್ ಅರಸೀಕೆರೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ, ಎರಡು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಎಲ್ಲಿ ನಡೆಯಿತು. ಇದ್ದಕ್ಕಿದ್ದ ಹಾಗೆ ಕಾಣೆಯಾಗುವ ಊರಿನ ಗೌಡ, ಆತನನ್ನು ಪತ್ತೆಹಚ್ಚಲು ಬಂದ ಪೋಲೀಸ್ ಕೂಡ ಕಾಣೆಯಾಗುತ್ತಾನೆ. ಇದೆಲ್ಲದರ ಹಿಂದೆ ಇರುವ ಮರ್ಮ ಏನೆಂಬುದನ್ನು ಹೇಳುವ ಚಿತ್ರವೇ ಅಮರಾವತಿ ಪೊಲೀಸ್ ಸ್ಟೇಷನ್. ಒಂದಷ್ಟು ನಾಗಾಸಾಧುಗಳ ಕಂಟೆಂಟ್ ಕೂಡ ಚಿತ್ರದಲ್ಲಿದೆ ಅದು ಹೇಗೆ, ಏಕೆ ಅಂತ ಚಿತ್ರ ನೋಡಿಯೇ ತಿಳಿದುಕೊಳ್ಳಬೇಕಿದೆ. ಯುವನಟ ಧರ್ಮ ಕೀರ್ತಿರಾಜ್ ಈ ಚಿತ್ರದಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಆಗಿ ನಟಿಸಿದ್ದು, ಗುರುರಾಜ್ ಜಗ್ಗೇಶ್ ಮತ್ತೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೇದ್ವಿಕ ಚಿತ್ರದ ನಾಯಕಿಯ ಪಾತ್ರ ಮಾಡಿದ್ದಾರೆ.
ಈಗಾಗಲೇ 36 ದಿನಗಳ ಕಾಲ ನಮ್ಮ ಚಿತ್ರದ ಶೇ.90 ಭಾಗದ ಚಿತ್ರೀಕರಣ ನಡೆಸಲಾಗಿದೆ. ಕ್ಲೈಮ್ಯಾಕ್ಸ್ ಹಾಗೂ ಹಾಡೊಂದರ ಶೂಟಿಂಗ್ ಮಾತ್ರವೇ ಬಾಕಿಯಿದೆ. ಅದನ್ನು ಗೋವಾ ಹಾಗೂ ಹಿಙದೂಪುರದಲ್ಲಿ ಚಿತ್ರೀಕರಿಸುವ ಪ್ಲಾನಿದೆ. ಅಲ್ಲದೆ ಮಾರ್ಚ್ 17 ರಂದು ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ದಿನ ನಮ್ಮ ಚಿತ್ರದ ಲವ್ ಟ್ರ್ಯಾಕೊಂದನ್ನು ಬಿಡುಗಡೆ ಮಾಡಲಿದ್ದಾರೆ... ಮಾರ್ಚ್ ಎಂಡ್ ಅಥವಾ ಏಪ್ರಿಲ್ ವೇಳೆಗೆ ಸಿನಿಮಾ ರಿಲೀಸ್ ಮಾಡೋ ಪ್ಲಾನ್ ನಲ್ಲಿದ್ದಾರೆ ಚಿತ್ರತಂಡ..