ದೇಶ

ಬಸಂತ್‌ ಪಂಚಮಿಯಂದು ಅಮೃತಸ್ನಾನ.. ಖುದ್ದು ಪರಿಶೀಲಿಸಿದ ಸಿಎಂ ಯೋಗಿ

ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಿಂದ ಸಾವು-ನೋವು ಆಗಿದ್ದರಿಂದ ಈ ಬಾರಿ ಹೆಚ್ಚಿನ ಮುಂಜಾಗ್ರತೆ ವಹಿಸಲಾಗಿದೆ. ಕುಂಭಮೇಳದ ವಾರ್‌ ರೂಂಗೆ ಖುದ್ದು ಸಿಎಂ ಯೋಗಿ ಆದಿತ್ಯನಾಥ್‌ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಜಗತ್ತಿನ ಅತೀದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭಮೇಳಕ್ಕೆ ಭಕ್ತಸಾಗರ ಹರಿದು ಬರುತ್ತಲೇ ಇದೆ. ಇಂದು ಬಸಂತ್‌ ಪಂಚಮಿಯ ಪವಿತ್ರ ದಿನವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತರು 3ನೇ ಅಮೃತ ಪುಣ್ಯಸ್ನಾನಕ್ಕೆ ಸಾಕ್ಷಿಯಾಗಿದ್ದಾರೆ. ಈಗಾಗಲೇ ಪ್ರಯಾಗ್‌ರಾಜ್‌ನ ಕುಂಭಮೇಳಕ್ಕೆ 33 ಕೋಟಿ ಭಕ್ತರು ಭೇಟಿ ನೀಡಿದ್ದು, ಬಸಂತ್‌ ಪಂಚಮಿಯ ದಿನವಾದ ಇಂದು ಬರೋಬ್ಬರಿ 3 ಕೋಟಿ ಜನರು ಆಗಮಿಸುವ ನಿರೀಕ್ಷೆ ಇದೆ. ಮೌನಿ ಅಮಾವಾಸ್ಯೆಯಂದು ಕಾಲ್ತುಳಿತದಿಂದ ಸಾವು-ನೋವು ಆಗಿದ್ದರಿಂದ ಈ ಬಾರಿ ಹೆಚ್ಚಿನ ಮುಂಜಾಗ್ರತೆ ವಹಿಸಲಾಗಿದೆ. ಕುಂಭಮೇಳದ ವಾರ್‌ ರೂಂಗೆ ಖುದ್ದು ಸಿಎಂ ಯೋಗಿ ಆದಿತ್ಯನಾಥ್‌ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಡಿಜಿಪಿ, ಪ್ರಧಾನ ಕಾರ್ಯದರ್ಶಿ ಗೃಹ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳಿಗೆ ಜೊತೆ ಮುಂಜಾತನೆ 3.30ರ ಸುಮಾರಿಗೆ ಸಭೆ ಕೂಡ ನಡೆಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮವಹಿಸಲು ಸೂಚಿಸಿದ್ದಾರೆ.