ಪಿಎಸ್‌ಐ ಆಗಿ ಆಯ್ಕೆಯಾಗಿದ್ದ ಕಾನ್ಸ್‌ಟೇಬಲ್ ನದಾಫ್ ವಿರುದ್ಧ ನಕಲಿ ಮಾರ್ಕ್ಸ್ ಕಾರ್ಡ್ ಸೃಷ್ಟಿಸಿರುವ ಆರೋಪ ಕೇಳಿ ಬಂದಿದೆ. ಹೀಗಾಗಿ ಪೊಲೀಸ್ ಪೇದೆ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ, ಭಾರತಿನಗರ ಠಾಣೆಯ ಕಾನ್ಸ್‌ಟೇಬಲ್ ಪೈಗಂಬರ್ ನದಾಫ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕ್ರೀಡಾ ಕೋಟಾದಲ್ಲಿ ಪಿಎಸ್‌ಐ ಆಗಿ ಆಯ್ಕೆಯಾಗಿದ್ದ ನದಾಫ್, ಬಿಎ ಪದವಿ ಅಂಕಪಟ್ಟಿಯ ನೈಜತೆ ತಿಳಿಯಲು ಮೈವಿವಿಗೆ ಕಳಿಸಲಾಗಿತ್ತು. ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ಎಂಬುವುದು ಪತ್ತೆಯಾಗಿದೆ. ಈ ಸಂಬಂಧ ನದಾಫ್ ವಿರುದ್ದ ಕ್ರಮಕ್ಕೆ ದೂರು ದಾಖಲಾಗಿದೆ.ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.