ಈಗಾಗ್ಲೇ ಮುಡಾ ಹಗರಣ ರಾಜ್ಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಇದರ ನಡುವೆ. ಮುಡಾದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದೆ. ಅದೇನಂದ್ರೆ ಮುಡಾ ಖಾತೆಗೆ ಹಣವನ್ನು ಜಮಾ ಮಾಡದೇ, ಅಧಿಕಾರಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಈ ಮೂಲಕ ಮುಡಾಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಈ ವಂಚನೆ ಪ್ರಕರಣದಲ್ಲಿ ಪ್ರಾಧಿಕಾರದ ಹೊರಗುತ್ತಿಗೆ ನೌಕರರು, ಅಧಿಕಾರಿಗಳು, ಬ್ಯಾಂಕ್ ಸಿಬ್ಬಂದಿ ಶಾಮಿಲಾಗಿದ್ದಾರೆ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಉಳಿಸಿ ಹೋರಾಟಗಾರರ ವೇದಿಕೆ ಆರೋಪ ಮಾಡಿದೆ. ಬ್ಯಾಂಕ್ ಆಫ್ ಬರೋಡ ಶಾಖೆಯ ಸಿಬ್ಬಂದಿ ಹಾಗೂ ಪ್ರಾಧಿಕಾರದ ಕೆಲ ಅಧಿಕಾರಿಗಳು ಕಂದಾಯ ಇಲಾಖೆಯ ವಿವಿಧ ಸೇವೆಗಳಿಗಾಗಿ, 93 ಗ್ರಾಹಕರಿಂದ ಹಣ ಪಡೆದಿದ್ರು. ಆದ್ರೆ ಪ್ರಾಧಿಕಾರದ ಖಾತೆಗೆ ಜಮೆ ಮಾಡಿಲ್ಲ ಎಂದು ಆರೋಪ ಕೇಳಿ ಬಂದಿದೆ.