ವಿದೇಶ

ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ

ಮೌನಿ ಅಮಾವಾಸ್ಯೆಯಂದು ನಿನ್ನೆ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.. ಈ ದುರಂತ ನಡೆದ ಮರುದಿನವೇ ಎರಡನೇ ಬಾರಿ ಅಗ್ನಿ ಅವಗಢ ಸಂಭವಿಸಿದೆ..

ಪ್ರಯಾಗ್‌ರಾಜ್‌ನ ಮಹಾಕುಂಭದಲ್ಲಿ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ.. ಇಂದು ಮಧ್ಯಾಹ್ನದ ಸೆಕ್ಟರ್ 22ರ ಜುಸಿ ಪ್ರದೇಶದ ಛತ್ನಾಂಗ್ ಘಾಟ್ ಬಳಿಯಿರುವ ನಾಗೇಶ್ವರ ಪೆಂಡಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.. ಅದೃಷ್ಟವಶಾತ್ ಅವಘಡದಲ್ಲಿ ಯಾರಿಗೂ ತೊಂದರೆಯಾಗಿಲ್ಲ..ಪೆಂಡಾಲ್‌ನಲ್ಲಿದ್ದವರು ಸಮಯಕ್ಕೆ ಸರಿಯಾಗಿ ಹೊರಬಂದಿದ್ದು, ಭಾರಿ ಅನಾಹುತವೊಂದು ತಪ್ಪಿದೆ.. ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಳ್ತಿದ್ದಂತೆ ತಕ್ಷಣ ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.. ಕಳೆದ ವಾರವೂ ಮಹಾಕುಂಭದಲ್ಲಿ ಅಗ್ನಿ ಅವಘಡ ಸಂಭವಿಸಿತ್ತು.. ಈ ವೇಳೆ ಹತ್ತಾರು ಟೆಂಟ್‌ಗಳು ಬೆಂಕಿ ಕೆನ್ನಾಲಿಗೆಗೆ ಹೊತ್ತಿ ಉರಿದಿದ್ದವು.. ಮೌನಿ ಅಮಾವಾಸ್ಯೆಯಂದು ನಿನ್ನೆ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.. ಈ ದುರಂತ ನಡೆದ ಮರುದಿನವೇ ಎರಡನೇ ಬಾರಿ ಅಗ್ನಿ ಅವಗಢ ಸಂಭವಿಸಿದೆ.. ಈ ಘಟನೆಗೆ ಕಾರಣ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ..