ಬೆಳಗಾವಿ : ಮತ್ತೆ ಎಂಇಎಸ್ ಮುಖಂಡರಿಗೆ ಭಾರೀ ಮುಖಭಂಗವಾಗಿದ್ದು, ನವೆಂಬರ್ 1 ರಂದು ಎಂಇಎಸ್ ಕರಾಳ ದಿನಾಚರಣೆಗೆ ಅನುಮತಿ ಇಲ್ಲ, ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಅವರು ಎಂಇಎಸ್ ಪುಂಡರಿಗೆ ಕಡ್ಡಿಮುರಿದಂತೆ ಹೇಳಿದ್ದಾರೆ. ರಾಜ್ಯೋತ್ಸವ ದಿನವೇ ಕರಾಳ ದಿನಕ್ಕೆ ಅನುಮತಿ ಕೊಡಲು ಎಂಇಎಸ್ನಿಂದ ಡಿಸಿಗೆ ಮನವಿ ಮಾಡಿದೆ. ಬೆಳಗಾವಿ ಡಿಸಿ ಕಚೇರಿಯಲ್ಲಿ ಎಂಇಎಸ್ ಮುಖಂಡರಿಗೆ ಡಿಸಿ ಮೊಹಮ್ಮದ್ ರೋಷನ್ ರಿಂದ ನಾಡದ್ರೋಹಿಗಳಿಗೆ ಬುದ್ಧಿವಾದ ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕಿದೆ. ನವೆಂಬರ್1 ರಂದು ಬಿಟ್ಟು ಪರ್ಯಾಯ ದಿನ ಕಾನೂನಿನ ಚೌಕಟ್ಟಿನಲ್ಲಿ ಪ್ರತಿಭಟನೆ ಮಾಡಲು ಅವಕಾಶ ಕೊಡ್ತಿನಿ. ಆದ್ರೆ ಯಾವುದೇ ರೀತಿಯ ಕರ್ನಾಟಕದ ಐಕ್ಯತೆ ಧಕ್ಕೆ ತರುವ ಹೋರಾಟ, ಪ್ರತಿಭಟನೆಗೆ ಅವಕಾಶ ಕೊಡುವುದಿಲ್ಲ ಎಂದು ಡಿಸಿ ಹೇಳಿದ್ದಾರೆ. ಗಣೇಶೋತ್ಸವ ಈದ್ ಮಿಲಾದ್ ಸಾಮರಸ್ಯದಿಂದ ಆಚರಣೆ ಮಾಡಿದ್ದೇವೆ. ಹಾಗೇ ನೀವೂ ರಾಜ್ಯೋತ್ಸವ ದಿನ ಬಿಟ್ಟು ಬೇರೆ ದಿನ ಹೋರಾಟ ಮಾಡಿ ಎಂದು ಡಿಸಿ ಮೊಹಮ್ಮದ್ ರೋಷನ್ ಸೂಚಿಸಿದ್ದಾರೆ.
ಎಂಇಎಸ್ ಮುಖಂಡರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದು, ಕನ್ನಡ ರಾಜ್ಯೋತ್ಸವ ಪೂರ್ವದಿಂದ ನಮ್ಮ ಹೋರಾಟವಿದೆ. ಹೀಗಾಗಿ ನವೆಂಬರ್1 ರಂದೇ ಕರಾಳ ದಿನಕ್ಕೆ ಅನುಮತಿ ಕೊಡಲು ಎಂಇಎಸ್ ಮುಖಂಡರ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಡಿಸಿ ಮೃದುವಾಗಿಯೇ ಖಡಕ್ ಸಂದೇಶ ರವಾನೆ ಮಾಡಿದ್ದಾರೆ. ಭಾಷಾ ಸಾಮಾರಸ್ಯ ಕಾಪಾಡುವುದು ಮುಖ್ಯಮವಾಗಿದೆ. ಪ್ರತಿ ರಾಜ್ಯೋತ್ಸವ ದಿನ ಬೆಳಗಾವಿ ಜಿಲ್ಲೆಯಲ್ಲಿ 2 ಸಾವಿರ ಕೇಸ್ ದಾಖಲಾಗುತ್ತವೆ. ನನಗೆ ಜಿಲ್ಲಾಧಿಕಾರಿ ಆಗಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿಯಿದೆ. ನಿಮ್ಮ ಮನವಿ ಸ್ವೀಕಾರ ಮಾಡಿರುವೆ, ಆದ್ರೆ ಜಿಲ್ಲಾಧಿಕಾರಿ ಆಗಿ ನಾನು ತೆಗೆದುಕೊಳ್ಳುವ ನಿರ್ಧಾರಕ್ಕೆ ನೀವು ಬದ್ಧರಾಗಿ ಇರಲೇಬೇಕು ಎಂದರು. ಇದೇ ವೇಳೆ ಎಂಇಎಸ್ ಪುಂಡರು ಗಡಿ ವಿವಾದ ಸುಪ್ರೀಂ ಕೋರ್ಟ್ನಲ್ಲಿದೆ ಎಂದರು. ಕಾನೂನು ಸುವ್ಯವಸ್ಥೆ ಹಾಳಾದ್ರೆ ಸುಪ್ರೀಂ ಕೋರ್ಟ್ ನನ್ನನ್ನು ಕರೆಸುತ್ತೆ ಎಂದು ಡಿಸಿ ಮೊಹಮ್ಮದ್ ರೋಷನ್ ಹೇಳಿದ್ದಾರೆ.
ಗಡಿಯಲ್ಲಿ ಕಿರಿಕ್ ಮಾಡಲು ನಾಡದ್ರೋಹಿ ಎಂಇಎಸ್ ಕಾರ್ಯಕರ್ತರ ಸಿದ್ಧತೆ ನಡೆಸಿದ್ದು, ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನದ ಮೆರವಣಿಗೆ ನಡೆಸಲು ನಿರ್ಧಾರ ಮಾಡಿದೆ. ಬೆಳಗಾವಿಯ ಮರಾಠಾ ಮಂಡಲ ಕಾರ್ಯಾಲಯದಲ್ಲಿ ಎಂಇಎಸ್ ನಾಯಕರು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಕರಾಳ ದಿನದ ಮೆರವಣಿಗೆ ನಡೆಸಲು ಎಂಇಎಸ್ ನಿರ್ಧಾರ ಮಾಡಿದೆ. ನವೆಂಬರ್ 1ರಂದು ಚೆನ್ನಮ್ಮ ವೃತ್ತದಲ್ಲಿ ಬೃಹತ್ ರಾಜ್ಯೋತ್ಸವ ಸಂಭ್ರಮಕ್ಕೆ ಬರದ ಸಿದ್ಧತೆ ನಡೆಸಿದೆ.

ಮತ್ತೊಂದೆಡೆ ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ಪ್ರತಿಯಾಗಿ ಕರಾಳ ದಿನ ಆಚರಣೆಗೆ ನಿರ್ಧಾರ ಮಾಡಿದ್ದಾರೆ. ಮಹಾರಾಷ್ಟ್ರ ನಾಯಕರನ್ನು ಆಹ್ವಾನಿಸಿ ಗಡಿಯಲ್ಲಿ ಶಾಂತಿಗೆ ಭಂಗ ತರಲು ಎಂಇಎಸ್ ಯತ್ನ ಮಾಡಿದೆ. ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ದಿನಗಣನೆ ಹಿನ್ನೆಲೆ, ಮಹಾರಾಷ್ಟ್ರ ರಾಜಕೀಯ ಪಕ್ಷಗಳ ನಾಯಕರು ಎಂಇಎಸ್ ನಾಯಕರ ಆಹ್ವಾನಕ್ಕೆ ಕಾಯುತ್ತಿದ್ದಾರೆ. ಎಂಇಎಸ್ ನಡೆಸುತ್ತಿರುವ ಕರಾಳ ದಿನಕ್ಕೆ ತನು-ಮನ-ದನದ ಸಹಾಯಕ್ಕೆ ಮಹಾ ನಾಯಕರು ಮುಂದಾಗಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಮರಾಠಿ ಅಸ್ಮಿತೆಯ ಲಾಭ ಪಡೆಯಲು ಮಹಾ ನಾಯಕರ ಕಸರತ್ತು ನಡೆಸಿದ್ದು, ಕನ್ನಡಪರ ಸಂಘಟನೆಗಳ ಸಭೆಯಲ್ಲಿ ಕರಾಳ ದಿನಾಚರಣೆ ಅವಕಾಶ ಕೊಡೊದಿಲ್ಲ ಎಂದು ಡಿಸಿ ಮಹಮ್ಮದ್ ರೋಷನ್ ಹೇಳಿದ್ದಾರೆ.