ನೋಡಿಕೊಂಡು ಕಾರು ಚಲಾಯಿಸಿ ಎಂದಿದ್ದಕ್ಕೆ, ನಾ ಡ್ರೈವರಾ ಖ್ಯಾತಿಯ ಜನಪದ ಗಾಯಕ ಮಾಳು ನಿಪನಾಳ, ಮೂವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ನಿಪನಾಳ ಗ್ರಾಮದ ಬಳಿ ಬೈಕ್ ಮೇಳೆ ತೆರಳುತ್ತಿದ್ದ ವೇಳೆ ಮೂವರ ಮೇಲೆ ಹಲ್ಲೆ ಮಾಡಿದ್ದಾರೆ.
ಬೇಕಾಬಿಟ್ಟಿ ಡ್ರೈವಿಂಗ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಶೇಖರ ಹಕ್ಯಾಗೋಳ, ಅಶ್ವಿನಿ ಈರಿಗಾರ, ರೂಪಾ ಹಕ್ಯಾಗೋಳ ಎಂಬುವರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದ್ದು, ಹಲ್ಲೆಯಿಂದ ಶೇಖರ ಹಕ್ಯಾಗೋಳ ತಲೆಗೆ ಗಂಭೀರ ಗಾಯ,ಓರ್ವ ಮಹಿಳೆಯ ಕೈಗೆ ಗಂಭೀರ ಗಾಯವಾಗಿದೆ. ಕುಡಿದ ಅಮಲಿನಲ್ಲಿ 10 ಜನ ಸೇರಿ ಮಹಿಳೆಯರು ಎನ್ನುವುದನ್ನೂ ಲೆಕ್ಕಿಸದೇ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಗಾಯಾಳುಗಳಿಗೆ ಚಿಕ್ಕೋಡಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ್ಗೆ ಒಳಪಡಿಸಲಾಗಿದೆ.