181 ಜನ ಪ್ರಯಾಣಿಕರಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಪತನಗೊಂಡ ಘಟನೆ ದಕ್ಷಿಣ ಕೊರಿಯಾದ ಮುವಾನ್ ಏರ್‌ಪೋರ್ಟ್‌ನಲ್ಲಿ ನಡೆದಿದೆ.. ಭೀಕರ ದುರ್ಘಟನೆಯಲ್ಲಿ 85ಕ್ಕೂ ಹೆಚ್ಚು ಪ್ರಯಾಣಿಕರು ಮೃತಪಟ್ಟಿದ್ದಾರೆ.. ಥೈಲ್ಯಾಂಡ್‌ನಿಂದ ಹಿಂದಿರುಗುತ್ತಿದ್ದ ಜೆಜು ಏರ್ ಫ್ಲೈಟ್ 2216 ವಿಮಾನವು ದಕ್ಷಿಣ ಕೊರಿಯಾದ ಮುವಾನ್ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಇಳಿಯುವಾಗ ರನ್‌ವೇಯಲ್ಲಿ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ.. ಈ ಭೀಕರ ದುರ್ಘಟನೆಯಲ್ಲಿ 85ಕ್ಕೂ ಹೆಚ್ಚು ಪ್ರಯಾಣಿಕರು ಜೀವಬಿಟ್ಟಿದ್ದಾರೆ.. ಲ್ಯಾಂಡಿಂಗ್ ಫೇಲ್ ಬಳಿಕ ವಿಮಾನವು ನಿಲ್ದಾಣದ ತಡೆಗೋಡೆಗೆ ಅಪ್ಪಳಿಸಿದೆ.. ಇದರಿಂದ ದೊಡ್ಡ ಸ್ಫೋಟ ಸಂಭವಿಸಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.. ಇಬ್ಬರನ್ನು ರಕ್ಷಿಸಲಾಗಿದ್ದು, ರಕ್ಷಣಾಕಾರ್ಯಾಚರಣೆ ಮುಂದುವರೆದಿದೆ..