ಕರ್ನಾಟಕ

ಮಸಾಜ್‌ ಸೆಂಟರ್‌ ಮೇಲೆ ದಾಳಿ.. ರಾಮಸೇನೆ ಕಾರ್ಯಕರ್ತರ ಮೇಲೆ ಕ್ರಮ - ದಿನೇಶ್‌ ಗುಂಡೂರಾವ್‌

ಸಂಘಟನೆಗೆ ದೇವರ ಹೆಸರು ಇಟ್ಟುಕೊಂಡು ಇಂತಹ ಕೃತ್ಯ ಮಾಡೋದು ರಾಮನಿಗೆ ಅಗೌರವ, ಹಿಂದೂ ಸಂಘಟನೆಗಳು ಕೂಡ ಇದನ್ನ ಖಂಡಿಸಬೇಕು, ನೈತಿಕ ಪೊಲೀಸ್ ಗಿರಿ ಮಾಡಿ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕ್ರಮವಹಿಸುತ್ತೇವೆ ಎಂದು ಗುಡುಗಿದ್ದಾರೆ..

ಮಂಗಳೂರಿನ ಮಸಾಜ್‌ ಸೆಂಟರ್‌ ಮೇಲೆ ರಾಮಸೇನೆ ಸಂಘಟನೆ ಕಾರ್ಯಕರ್ತರಿಂದ ನಡೆದ ದಾಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಆಕ್ರೋಶ ಹೊರಹಾಕಿದ್ದಾರೆ.. ದೇವರ ಹೆಸರು ಹೇಳಿಕೊಂಡು ಶ್ರೀರಾಮನಿಗೆ ಕಳಂಕ ತರುವ ಕೆಲಸ ಮಾಡಬೇಡಿ, ಯಾರಿಗೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರವಿಲ್ಲ, ಸಂಘಟನೆ ಹೆಸರಲ್ಲಿ ಇಂತಹ ದಾಂದಲೆ ಮಾಡುವುದು  ಸರಿಯಲ್ಲ, ಇಂತವರ ಮೇಲೆ ಕಟ್ಟುನಿಟ್ಟಾದ ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.. ಮಸಾಜ್‌ ಸೆಂಟರ್‌ನಲ್ಲಿ ಏನಾದರೂ ಅಕ್ರಮ ನಡೆಯುತ್ತಿದ್ದರೆ ಪೊಲೀಸರ ಗಮನಕ್ಕೆ ತಂದು ದೂರು ನೀಡಬೇಕು, ಇವರೇ ನುಗ್ಗಿ ದಾಂದಲೆ ಮಾಡಿ ಗೂಂಡಾಗಿರಿ ಮಾಡುವುದಲ್ಲ, ಕಾನೂನು ವ್ಯವಸ್ಥೆಯನ್ನ ಎಲ್ಲರೂ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.. ಸಂಘಟನೆಗೆ ದೇವರ ಹೆಸರು ಇಟ್ಟುಕೊಂಡು ಇಂತಹ ಕೃತ್ಯ ಮಾಡೋದು ರಾಮನಿಗೆ ಅಗೌರವ, ಹಿಂದೂ ಸಂಘಟನೆಗಳು ಕೂಡ ಇದನ್ನ ಖಂಡಿಸಬೇಕು, ನೈತಿಕ ಪೊಲೀಸ್ ಗಿರಿ ಮಾಡಿ ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕ್ರಮವಹಿಸುತ್ತೇವೆ ಎಂದು ಗುಡುಗಿದ್ದಾರೆ..