ತುಮಕೂರು : ಹೇಮಾವತಿ ಎಕ್ಸ್‌ಪ್ರೆಸ್ ಕೆನಾಲ್ ವಿರೋಧಿ ಹೋರಾಟ ತೀವ್ರತೆ ಪಡೆದುಕೊಂಡಿದೆ. ಪಾದಯಾತ್ರೆ ನಡೆಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಇಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಪೊಲೀಸರು ಶಾಸಕ ಸುರೇಶ್ ಗೌಡ ಅವರನ್ನು ತಡೆದರು.
ಗುಬ್ಬಿಯಿಂದ ತುಮಕೂರು ನಗರದ ಕಡೆಗೆ ಪಾದಯಾತ್ರೆಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ ನೇತೃತ್ವದಲ್ಲಿ ಗೃಹಸಚಿವರ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಧೋರಣೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡದಿದ್ದು, ಪಾದಯಾತ್ರಿಗಳನ್ನು ತಡೆದ ಪೊಲೀಸರು ವಾಪಸ್ ಕಳುಹಿಸಿದ್ದಾರೆ.