ದೇಶ

ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿ ಪ್ರಧಾನಿ ಮೋದಿ ಸಾಂತ್ವನ

ಕಟ್ಟಡ ಕುಸಿತ ಪ್ರಕರಣದಲ್ಲಿ ಇಲ್ಲಿಯವರೆಗೂ 8 ಮಂದಿ ಬಲಿಯಾಗಿದ್ದು, ಮೃತ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿ ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು : ಬೆಂಗಳೂರಿನ ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ದುರಂತಕ್ಕೀಡಾದ ಕುಟುಂಬಗಳಿಗೆ ಪರಿಹಾರ ಘೋಷಿಸಿ ಎಕ್ಸ್ ಖಾತೆಯಲ್ಲಿ ಪ್ರಧಾನಿ ಕಾರ್ಯಾಲಯ ಸಂದೇಶ ಪ್ರಕಟಿಸಿದೆ.

ಕಟ್ಟಡ ಕುಸಿತ ಪ್ರಕರಣದಲ್ಲಿ ಇಲ್ಲಿಯವರೆಗೂ 8 ಮಂದಿ ಬಲಿಯಾಗಿದ್ದು, ಮೃತ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಜೊತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಣೆ ಮಾಡಿ ಸಂತಾಪ ಸೂಚಿಸಿದ್ದಾರೆ. 

ಕಟ್ಟಡ ಕುಸಿತದಲ್ಲಿ ಬಿಹಾರ ಮೂಲದ ಅರ್ಮಾನ್, ಮೊಹಮ್ಮದ್ ಸಾಹೀಲ್, ಶ್ರೀರಾನ್ ಕಿರುಪಾಲ್, ಸೋಲೋ ಪಾಸ್ವಾನ್, ತಮಿಳುನಾಡು ಮೂಲದ ಮಣಿಕಂಠನ್, ಸತ್ಯಾರಾಜು, ಆಂಧ್ರದ ತುಳುಸಿರೆಡ್ಡಿ, ಉತ್ತರ ಪ್ರದೇಶದ ಪುಲ್ಚನ್ ಯಾದವ್ ಎಂಬುವರು ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಭೇಟಿ ನೀಡಿ, ದುರಂತದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

Anguished by the loss of lives due to the collapse of a building in Bengaluru. My thoughts are with all those who have lost their loved ones. I pray that the injured recover soon.

An ex-gratia of Rs. 2 lakhs from PMNRF would be provided to the next of kin of each deceased. The…