ಕರ್ನಾಟಕ

ಬಾಬುಸಾಪಾಳ್ಯ ನಿರ್ಮಾಣ ಹಂತದ ಕಟ್ಟಡ ಕುಸಿತ; ಗಾಯಾಳುಗಳ ಆರೋಗ್ಯ ವಿಚಾರಸಿದ ಸಿಎಂ ಸಿದ್ದರಾಮಯ್ಯ..!

ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನ ವಿಚಾರಿಸಿದ್ದಾರೆ. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಒದಗಿಸಿ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತದಲ್ಲಿ ಸಿಲುಕಿ ಗಂಭೀರ ಗಾಯಗೊಂಡು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯವನ್ನ ವಿಚಾರಿಸಿದ್ದಾರೆ. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಒದಗಿಸಿ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇನ್ನೂ ಸಿಎಂಗೆ ಸಚಿವ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಸಾಥ್  ನೀಡಿದ್ದಾರೆ.